ಕಟಪಾಡಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸಿಗರ ವಿರುದ್ಧ ರಚನಾತ್ಮಕವಾಗಿ ಹೋರಾಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕಾಗಿದೆ.
ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು.
ಕಾಪು ವೀರಭದ್ರ ಸಭಾಭವನದಲ್ಲಿ ಮಂಗಳವಾರ ನಡೆದ ಕಾಪು ಕ್ಷೇತ್ರ ಬಿಜೆಪಿ ಕಾರ್ಯಕಾರಣಿಯನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷ ದ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ಮೂಲಕ ಬಿಜೆಪಿ ಪಕ್ಷ ದ ಸಿದ್ಧಾಂತ ಏನು ಎನ್ನುವುದನ್ನು ತೋರಿಸಿಕೊಟ್ಟಿದೆ. ಬಿಜೆಪಿಗೆ ಕಾರ್ಯಕರ್ತರೇ ಪ್ರಮುಖ ಆಸ್ತಿ. ಕಾರ್ಯಕರ್ತರ ಮೂಲಕವೇ ಅಧಿಕಾರಕ್ಕೆ ಬಂದಿರುವ ಸರಕಾರ ನಮ್ಮದು. ಅದೇ ಕಾರ್ಯಕರ್ತರ ಬಲದಿಂದಲೇ ಬಹುಮತದೊಂದಿಗೆ ಚುಣಾವಣೆಯಲ್ಲಿ ಗೆಲ್ಲಿಸೋಣ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾರ್ಯದರ್ಶಿಗಳಾದ ಸುನೀತಾ ನಾಯಕ್, ಸಂಧ್ಯಾ ರಮೇಶ್, ರಮಾಕಾಂತ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…