Featured

ಮೋದಿ ಮನವಿಗೆ ಸಮ್ಮತಿ ನೀಡಿದ ಬ್ರಿಟನ್ ಆಂತರಿಕ ಸಂಸತ್ತು, ವಿಜಯ್ ಮಲ್ಯ ಶೀಘ್ರ ಭಾರತಕ್ಕೆ ಗಡಿಪಾರು.

ಲಂಡನ್: ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದ ದೊರೆ ವಿಜಯ್ ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ.

ಉದ್ಯಮಿ ಮಲ್ಯರನ್ನು ಗಡಿಪಾರು ಮಾಡಲು ಭಾರತ ಸರ್ಕಾರ ಮಾಡಿದ್ದ ಮನವಿಗೆ ಬ್ರಿಟನ್ ಸಚಿವಾಲಯ ಸಮ್ಮತಿಸಿದೆ. ಭಾರತದ ಮನವಿಗೆ ಬ್ರಿಟನ್ ಗೃಹ ಕಾರ್ಯದರ್ಶಿ ಸಜೀದ್ ಜಾವಿದ್ ಫೆಬ್ರವರಿ 3 ರಂದು ಸಹಿ ಹಾಕಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬ್ರಿಟನ್ ಸರ್ಕಾರದ ಈ ನಿರ್ಣಯದಿಂದ ಮಲ್ಯಗೆ ಭಾರೀ ಹಿನ್ನಡೆ ಆಗಿದೆ.

ಕಳೆದ ವರ್ಷದ ಡಿಸೆಂಬರಿನಲ್ಲಿ ಈ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಮಲ್ಯ ಗಡಿಪಾರಿಗೆ ಅನುಮತಿ ನೀಡಿತ್ತು. ಅಲ್ಲದೇ ಗಡಿಪಾರು ಆದೇಶ ನೀಡುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ನ್ಯಾಯಾಲಯದ ತೀರ್ಪಿಗೆ ಸಂಸತ್ ಒಪ್ಪಿಗೆ ಮಾತ್ರ ಬಾಕಿ ಇತ್ತು. ಆದರೆ ಮಲ್ಯ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ ಬ್ಯಾಂಕ್ ಸಾಲ ಮರು ಪಾವತಿ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

ಮುಂದಿನ ನಡೆ ಏನು?
ಮಲ್ಯ ಗಡಿಪಾರಿನ ಕುರಿತು ಲಂಡನ್ ಸಂಸತ್ ಕೈಗೊಂಡಿರುವ ನಿರ್ಣಯದಿಂದ ಭಾರತ ಸರ್ಕಾರಕ್ಕೆ ಮತ್ತೊಂದು ಗೆಲುವು ಸಿಕ್ಕಂತಾಗಿದೆ. ಸದ್ಯ ಲಂಡನ್ ಆಂತರಿಕ ಸಂಸತ್ತಿನ ನಿರ್ಣಯವನ್ನು ಪ್ರಶ್ನಿಸಿ 14 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯಗೆ ಅವಕಾಶ ಇದೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

7 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago