Featured

ಮೋದಿ, ಯೋಗಿಯ ಮಾದರಿಯಲ್ಲಿ ಸ್ಥೈರ್ಯವಾಗಲೀ, ಧೈರ್ಯವಾಗಲೀ ಬೊಮ್ಮಾಯಿ ಸರ್ಕಾರಕ್ಕಿಲ್ಲ : ಪ್ರಮೋದ್ ಮುತಾಲಿಕ್ ಆಕ್ರೋಶ – Vishwanews24

ಹಿಂದೂಗಳ ಸುರಕ್ಷತೆ ಬಗ್ಗೆ ಬಿಜೆಪಿಗೆ ನಿಜವಾದ ಕಾಳಜಿ ಇದ್ದರೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಲಿ : ಮುತಾಲಿಕ್ ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂತೆ ಬೊಮ್ಮಾಯಿ ಸರ್ಕಾರಕ್ಕೆ ಗಟ್ಸ್‌ ಇಲ್ಲ. ಕಾರಣ ಭಯ. ಕೇವಲ ಮತಕ್ಕಾಗಿ ಅಲ್ಲಾಡುತ್ತಿದ್ದಾರಷ್ಟೇ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ನಗರದಲ್ಲಿ ಬುಧವಾರ ಮಾತನಾಡಿದ ಅವರು, ಮೋದಿ, ಯೋಗಿಯ ಮಾದರಿಯಲ್ಲಿ ಸ್ಥೈರ್ಯವಾಗಲೀ, ಧೈರ್ಯವಾಗಲೀ ಇವರಿಗಲ್ಲ. ಆ ನೈತಿಕತೆ, ಮಾನಸಿಕತೆಯನ್ನೂ ಇವರು ಉಳಿಸಿಕೊಂಡಿಲ್ಲ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಪ್ರವೀಣ್ ನೆಟ್ಟಾರ್ ಹತ್ಯೆ- ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಿ ಎಂದ ಪ್ರವೀಣ್ ಸೋದರ ಮಾವ ಲೋಕೆಶ್ – Vishwanews24 

ಕೊಲೆ, ಹಲ್ಲೆಯಂತಹ ಘಟನೆಗಳ ಸಂದರ್ಭದಲ್ಲಿ ಉಗ್ರ ಹೇಳಿಕೆಗಳು ಸರ್ಕಾರದಿಂದ ಬರುತ್ತವೆ. ಆದರೆ ಮುಂದೆ ಯಾವುದೇ ಕ್ರಮ ಇರುವುದಿಲ್ಲ. ಈವರೆಗಿನ ಘಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಠಿಣ ಪ್ರಕ್ರಿಯೆಗಳು ನಡೆದಿಲ್ಲ. ಪ್ರವೀಣ್ ಹತ್ಯೆಯಾಗಿರುವುದು ಇದೇ ಕಾರಣಕ್ಕೆ. ಕಾನೂನು ಮತ್ತು ಸರ್ಕಾರದ ವೈಫಲ್ಯಗಳಿಂದಾಗಿ ಪದೇಪದೇ ಘಟನೆಗಳು ಮರು ಕಳಿಸುತ್ತಿವೆ. ಹಿಂದೂಗಳ ಸುರಕ್ಷತೆ ಬಗ್ಗೆ ಬಿಜೆಪಿಗೆ ನಿಜವಾದ ಕಾಳಜಿ ಇದ್ದರೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಮಂಗಳೂರು: ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ – ಮೃತ ಮಶೂದ್ ಮತ್ತು ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಿ : ಖಾದರ್ ಒತ್ತಾಯ – Vishwanews24 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

11 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

11 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

12 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago