Featured

ಮೋದಿ ಸರಕಾರಕ್ಕೆ ಮತ್ತೊಂದು ಜಯ ; ವಿಜಯ ಮಲ್ಯ ಗಡಿಪಾರು..ಭಾರತಕ್ಕೆ ಒಪ್ಪಿಸಲು ಬ್ರಿಟನ್ ಕೋರ್ಟ್ ಆದೇಶ..

ಲಂಡನ್‌: ಯುಪಿಎ ಅವಧಿಯಲ್ಲಿ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾದ ಉದ್ಯಮಿ ವಿಜಯ ಮಲ್ಯರನ್ನು ಗಡೀಪಾರು ಮಾಡುವಂತೆ ಲಂಡನ್‌ನ ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಇದೊಂದು ಮಹತ್ವದ ರಾಜತಾಂತ್ರಿಕ ವಿಜಯವೇ ಆಗಿದೆ.

ಭಾರತದ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್‌ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್‌ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಕೋರ್ಟ್‌ ತೀರ್ಪು
2016ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವಂಚಿಸಿ ಲಂಡನ್‌ಗೆ ಮಲ್ಯ ಪರಾರಿಯಾದ ಬಳಿಕ ಮೋದಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿದ್ದ ನಿರಂತರ ಟೀಕಾ ಪ್ರಹಾರಕ್ಕೆ ಸೋಮವಾರ ಪೂರ್ಣ ವಿರಾಮ ಸಿಕ್ಕಿದಂತಾಗಿದೆ. ಸಿಬಿಐ, ಇತರ ತನಿಖಾ ಸಂಸ್ಥೆಗಳು, ಖುದ್ದು ಪ್ರಧಾನಿ ನರೇಂದ್ರ ಮೋದಿ ಹಲವು ಹಂತದಲ್ಲಿ ಬ್ರಿಟನ್‌ ಸರಕಾರದ ಜತೆ ಮಾತುಕತೆ ನಡೆಸಿದ್ದು ಪರಿಣಾಮ ಬೀರಿದೆ.

ವೆಸ್ಟ್‌ಮಿನಿಸ್ಟರ್‌ನಲ್ಲಿರುವ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ನ್ಯಾಯಾಧೀಶೆ ತೀರ್ಪು ನೀಡಿ, ಮಲ್ಯ ಪ್ರತಿಪಾದಿಸಿದ್ದಂತೆ ಭಾರತದ ಅಧಿಕಾರಿಗಳು ಪೂರ್ವಗ್ರಹ ಪೀಡಿತರಾಗಿ ಅವರ ಮೇಲೆ ಕೇಸು ದಾಖಲಿಸಿಲ್ಲ. ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂದು 62 ಪುಟಗಳ ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. ಮಲ್ಯರ ಸಂಸ್ಥೆಗೆ ಯಾವ ರೀತಿಯಲ್ಲಿ ಸಾಲ ನೀಡಲಾಯಿತು ಮತ್ತು ಅದರ ಉಪಯೋಗ ಯಾವ ರೀತಿ ನಡೆಯಿತು ಎಂಬುದೇ ಪ್ರಶ್ನಾರ್ಹ ಎಂದು ಎಮ್ಮಾ ಅಭಿಪ್ರಾಯಪಟ್ಟಿದ್ದಾರೆ.

ಭಾರತಕ್ಕೆ ಗಡೀಪಾರಾದರೆ ಮಲ್ಯರ ಮಾನವ ಹಕ್ಕುಗಳಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ. ಇದರ ಜತೆಗೆ ಅವರ ಹಣಕಾಸಿನ ವ್ಯವಹಾರಗಳಲ್ಲಿಯೂ ಕೂಡ ಪ್ರಶ್ನಾರ್ಹವಾದ ಅಂಶಗಳು ಇದ್ದವು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. “ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ವೈಯಕ್ತಿಕ ವೈದ್ಯಕೀಯ ವ್ಯವಸ್ಥೆಗಳನ್ನು ಪೂರೈಸಲು ಅವಕಾಶ ನೀಡಲಾಗಿದೆ. ಜೈಲಿನಲ್ಲಿ ಯಾವುದೇ ರೀತಿಯ ಅಭದ್ರತೆ ಉಂಟಾದೀತು’ ಎಂಬ ವಾದಕ್ಕೆ ಅವಕಾಶವೇ ಇಲ್ಲ ಎಂದು ನ್ಯಾಯಾಧೀಶೆ ಹೇಳಿದ್ದಾರೆ.

ಲಂಡನ್‌ ಕೋರ್ಟ್‌ನಲ್ಲಿ ಸೊಮವಾರ ಭಾರತಕ್ಕೆ ಗಡಿಪಾರು ಮಾಡುವಂತೆ ತೀರ್ಪು ಪ್ರಕಟವಾಗಿದ್ದು. ನಂತರ ಮಲ್ಯ ಬಂಧನಕ್ಕೀಡಾಗಲಿದ್ದಾರೆ. ಮುಂಬಯಿನ ಅರ್ಥರ್‌ ರಸ್ತೆಯ ಜೈಲಿನ 12ನೇ ಬರಾಕ್‌ನಲ್ಲಿ ಮಲ್ಯ ಸೆರೆವಾಸದಲ್ಲಿರಬೇಕಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago