ಲಂಡನ್: ಯುಪಿಎ ಅವಧಿಯಲ್ಲಿ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾದ ಉದ್ಯಮಿ ವಿಜಯ ಮಲ್ಯರನ್ನು ಗಡೀಪಾರು ಮಾಡುವಂತೆ ಲಂಡನ್‌ನ ವೆಸ್ಟ್‌ಮಿನಿಸ್ಟರ್ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಇದೊಂದು ಮಹತ್ವದ ರಾಜತಾಂತ್ರಿಕ ವಿಜಯವೇ ಆಗಿದೆ.
ಭಾರತದ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.
ಕೋರ್ಟ್ ತೀರ್ಪು
2016ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವಂಚಿಸಿ ಲಂಡನ್‌ಗೆ ಮಲ್ಯ ಪರಾರಿಯಾದ ಬಳಿಕ ಮೋದಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿದ್ದ ನಿರಂತರ ಟೀಕಾ ಪ್ರಹಾರಕ್ಕೆ ಸೋಮವಾರ ಪೂರ್ಣ ವಿರಾಮ ಸಿಕ್ಕಿದಂತಾಗಿದೆ. ಸಿಬಿಐ, ಇತರ ತನಿಖಾ ಸಂಸ್ಥೆಗಳು, ಖುದ್ದು ಪ್ರಧಾನಿ ನರೇಂದ್ರ ಮೋದಿ ಹಲವು ಹಂತದಲ್ಲಿ ಬ್ರಿಟನ್ ಸರಕಾರದ ಜತೆ ಮಾತುಕತೆ ನಡೆಸಿದ್ದು ಪರಿಣಾಮ ಬೀರಿದೆ.
ವೆಸ್ಟ್‌ಮಿನಿಸ್ಟರ್‌ನಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ನ್ಯಾಯಾಧೀಶೆ ತೀರ್ಪು ನೀಡಿ, ಮಲ್ಯ ಪ್ರತಿಪಾದಿಸಿದ್ದಂತೆ ಭಾರತದ ಅಧಿಕಾರಿಗಳು ಪೂರ್ವಗ್ರಹ ಪೀಡಿತರಾಗಿ ಅವರ ಮೇಲೆ ಕೇಸು ದಾಖಲಿಸಿಲ್ಲ. ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂದು 62 ಪುಟಗಳ ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. ಮಲ್ಯರ ಸಂಸ್ಥೆಗೆ ಯಾವ ರೀತಿಯಲ್ಲಿ ಸಾಲ ನೀಡಲಾಯಿತು ಮತ್ತು ಅದರ ಉಪಯೋಗ ಯಾವ ರೀತಿ ನಡೆಯಿತು ಎಂಬುದೇ ಪ್ರಶ್ನಾರ್ಹ ಎಂದು ಎಮ್ಮಾ ಅಭಿಪ್ರಾಯಪಟ್ಟಿದ್ದಾರೆ.
ಭಾರತಕ್ಕೆ ಗಡೀಪಾರಾದರೆ ಮಲ್ಯರ ಮಾನವ ಹಕ್ಕುಗಳಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ. ಇದರ ಜತೆಗೆ ಅವರ ಹಣಕಾಸಿನ ವ್ಯವಹಾರಗಳಲ್ಲಿಯೂ ಕೂಡ ಪ್ರಶ್ನಾರ್ಹವಾದ ಅಂಶಗಳು ಇದ್ದವು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. “ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ವೈಯಕ್ತಿಕ ವೈದ್ಯಕೀಯ ವ್ಯವಸ್ಥೆಗಳನ್ನು ಪೂರೈಸಲು ಅವಕಾಶ ನೀಡಲಾಗಿದೆ. ಜೈಲಿನಲ್ಲಿ ಯಾವುದೇ ರೀತಿಯ ಅಭದ್ರತೆ ಉಂಟಾದೀತು’ ಎಂಬ ವಾದಕ್ಕೆ ಅವಕಾಶವೇ ಇಲ್ಲ ಎಂದು ನ್ಯಾಯಾಧೀಶೆ ಹೇಳಿದ್ದಾರೆ.
ಲಂಡನ್ ಕೋರ್ಟ್‌ನಲ್ಲಿ ಸೊಮವಾರ ಭಾರತಕ್ಕೆ ಗಡಿಪಾರು ಮಾಡುವಂತೆ ತೀರ್ಪು ಪ್ರಕಟವಾಗಿದ್ದು. ನಂತರ ಮಲ್ಯ ಬಂಧನಕ್ಕೀಡಾಗಲಿದ್ದಾರೆ. ಮುಂಬಯಿನ ಅರ್ಥರ್ ರಸ್ತೆಯ ಜೈಲಿನ 12ನೇ ಬರಾಕ್‌ನಲ್ಲಿ ಮಲ್ಯ ಸೆರೆವಾಸದಲ್ಲಿರಬೇಕಾಗುತ್ತದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…