ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ.
ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…