Featured

ಮೋದಿ ಸರಕಾರದ ಈ ಕ್ರಮಕ್ಕೆ ‘ಬಾಂಗ್ಲಾ’ ದೀದಿ ಮತ್ತು ಕಾಂಗ್ರೆಸ್ ಕಂಗಾಲು.. ..

ನವದೆಹಲಿ : ಉತ್ತರ ಭಾರತ ಮಾತ್ರವಲ್ಲದೆ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲೂ ಅಕ್ರಮವಾಗಿ ವಲಸೆ ಬಂದು ಆಶ್ರಯ ಪಡೆಯುತ್ತಿರುವ ಬಾಂಗ್ಲಾ ದೇಶದ ನಿವಾಸಿಗಳನ್ನು ದೇಶದಿಂದ ಓಡಿಸಬೇಕು ಎಂಬ ಕೂಗು ಈ ಹಿಂದಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ ಈ ಹಿಂದಿನ ಕಾಂಗ್ರೆಸ್ ಸರಕಾರ ತಮ್ಮ ರಾಜಕೀಯ ಲಾಭವನ್ನೇ ಗಮನದಲ್ಲಿಟ್ಟುಕೊಂಡು ಯಾವುದನ್ನೂ ತಡೆಯುವ ಪ್ರಯತ್ನ ಮಾಡಿರಲಿಲ್ಲ, ಆದರೆ ಇದೀಗ ಮೋದಿ ಸರಕಾರ ಅಕ್ರಮ ವಲಸಿಗರಿಗೆ ಬ್ರೇಕ್ ಹಾಕುವ ಸಲುವಾಗಿ ಸುಮಾರು ೪೦ ಲಕ್ಷ ಬಾಂಗ್ಲಾ ವಲಸಿಗರನ್ನು ದೇಶದಿಂದ ಕಿಕ್ ಔಟ್ ಮಾಡಲು ನಿರ್ಧರಿಸಿದೆ..

ದೇಶದಲ್ಲಿ ಸುಮಾರು ೪೦ ಲಕ್ಷ ಜನರು ಭಾರತದ ಪೌರತ್ವವನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಅಂಕಿ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರಕಾರ ಈ ಜಾಲವನ್ನು ತಡೆಯಲೆಂದೇ ಒಂದು ಹೆಜ್ಜೆ ಮುಂದೆ ಬಂದು ಎಲ್ಲಾ ವಿರೋಧಿಗಳಿಗೂ ಬಿಗ್ ಶಾಕ್ ನೀಡಿದ್ದಾರೆ. ಏಕೆಂದರೆ ಕಾಂಗ್ರೆಸ್ ಸೇರಿದಂತೆ ಪಶ್ಚಿಮ ಬಂಗಾಳದ ದೀದಿ ಸರಕಾರ (ತೃಣಮೂಲ ಕಾಂಗ್ರೆಸ್) ಆಡಳಿತದಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಈ ಅಕ್ರಮ ವಲಸಿಗರು. ಬಂಗಾಲಿ ಭಾಷೆ ಮಾತನಾಡುವುದರಿಂದ ಯಾರಿಗೂ ಸಂಶಯ ಕೂಡ ಬರುವುದಿಲ್ಲ, ಆದ್ದರಿಂದ ಇದನ್ನೇ ಬಂಡವಾಳವನ್ನಾಗಿ ಇಟ್ಟುಕೊಂಡ ದೀದಿ ಸರಕಾರ ಭಾರೀ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಭಾರತದ ಪೌರತ್ವ ನೀಡಿತ್ತು. ಈ ವಿಚಾರ ಇದೀಗ ಬಯಲಾಗಿರುವುದರಿಂದ ಈ ಎಲ್ಲಾ ವಲಸಿಗರನ್ನೂ ಭಾರತದಿಂದ ಓಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮೋದಿ ಸರಕಾರದ ಈ ಕ್ರಮವನ್ನು ನಿಜವಾದ ದೇಶಭಕ್ತರಾದರೆ ಬೆಂಬಲಿಸಬೇಕಿತ್ತು, ಆದರೆ ಕಾಂಗ್ರೆಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್ ವಿರೋಧಿಸಲು ಆರಂಭಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಸರಕಾರದ ಈ ಕ್ರಮವನ್ನು ಖಂಡಿಸಿದ್ದು, ಕೇಂದ್ರದ ಬಿಜೆಪಿ ಸರಕಾರ ಭಾರತೀಯರನ್ನು ದೇಶದಿಂದ ಹೊರದಬ್ಬಲು ಪ್ರಯತ್ನಿಸುತ್ತಿದೆ, ಹಾಗಾದರೆ ಈ ೪೦ ಲಕ್ಷ ಜನ ಎಲ್ಲಿಗೆ ಹೋಗಬೇಕು? ಮತ್ತು ಅವರಿಗೆ ಕೇಂದ್ರ ಸರಕಾರ ಪುನರ್ವಸತಿ ಕಲ್ಪಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್ ಮುಖಂಡ ರಿಫುನ್ ಬೋರಾ ಅವರು , ಈ ನಿರ್ಧಾರದ ಹಿಂದೆ ಬಿಜೆಪಿಯ ರಾಜಕೀಯ ಉದ್ದೇಶವಿದೆ, ಇದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಅಷ್ಟಕ್ಕೂ ಅಕ್ರಮ ವಲಸಿಗರ ಬಗ್ಗೆ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮುಂದಾದರೆ ಈ ಕೆಲ ರಾಜಕೀಯ ಪಕ್ಷಗಳು ಯಾಕೆ ವಿರೋಧಿಸುತ್ತಿದೆ ಎಂಬುದನ್ನು ವಿವರವಾಗಿ ಹೇಳಬೇಕಾಗಿಲ್ಲ. ಏಕೆಂದರೆ ತಮ್ಮ ಅಧಿಕಾರದ ಕುರ್ಚಿ ಗಟ್ಟಿಯಾಗಿ ಉಳಿಯಬೇಕಾದರೆ ಕೇವಲ ಅಕ್ರಮ ವಿದೇಶಿ ವಲಸಿಗರಿಂದ ಮಾತ್ರ ಸಾಧ್ಯ, ನೈಜ ಭಾರತೀಯರು ಇಂತಹ ದೇಶದ್ರೋಹಿಗಳ ಪರವಾಗಿ ಎಂದಿಗೂ ನಿಲ್ಲುವುದಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಿರುವ ಕಾರಣದಿಂದಲೇ ಮೋದಿ ಸರಕಾರದ ಈ ಕ್ರಮವನ್ನು ವಿರೋಧಿಸುತ್ತಿದ್ದಾರೆ..

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago