Featured

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ

ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು, ಯುವಕರು, ಅನ್ನದಾತರು ಹಾಗೂ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಅವಕಾಶ, ಶಿಕ್ಷಣ ಹಾಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

ಗ್ರಾಮೀಣ ಭಾಗಕ್ಕೆ ವಿದ್ಯುತ್ ಸಂಪರ್ಕ, ಶೌಚಾಲಯ, ಮೂಲಸೌಕರ್ಯ ಸೇರಿದಂತೆ ಜನರ ಜೀವನಮಟ್ಟ ಸುಧಾರಿಸುವ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೋವಿಡ್ ಮಹಾಮಾರಿ, ರಷ್ಯಾ-ಉಕ್ರೇನ್ ಯುದ್ಧ ಸೇರಿದಂತೆ ಜಾಗತಿಕ ಸವಾಲುಗಳ ನಡುವೆಯೂ ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.

ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ರಕ್ಷಣಾ, ವಿದ್ಯುತ್, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹತ್ವದ ಬದಲಾವಣೆಗಳಾಗುತ್ತಿವೆ. ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಇಂಡಿಯಾ ಹಾಗೂ ಸ್ಕಿಲ್ ಇಂಡಿಯಾ ಯೋಜನೆಗಳ ಮೂಲಕ ಯುವಶಕ್ತಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು.

‘ಸಟ್ಕಾ ಸಾಥ್, ಸಬ್ಬಾ ವಿಕಾಸ್, ಸಬ್ಬಾ ವಿಶ್ವಾಸ, ಸಬ್ಬಾ ಪ್ರಯಾಸ್’ ಎಂಬ ಆಶಯದೊಂದಿಗೆ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ವರ್ಗದ ಜನರನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಸಂಕಲ್ಪವನ್ನು ಕೇಂದ್ರ ಸರ್ಕಾರ ಹೊಂದಿದೆ. ಯುವಜನತೆಯ ಶಕ್ತಿಯ ಮೇಲೆ ವಿಶ್ವಾಸವಿಟ್ಟು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಸಭೆಯಲ್ಲಿ ಶಾಸಕ ಸಿ.ಸಿ. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಬಿಜೆಪಿ ಮುಖಂಡ ಅನೀಲ ಮೆಣಸಿನಕಾಯಿ, ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಲಿಂಗರಾಜ ಪಾಟೀಲ, ಆರ್.ಕೆ. ಚವ್ಹಾಣ, ಪಕ್ಕಿರೇಶ ರಟ್ಟಿಹಳ್ಳಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

11 minutes ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

19 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

27 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

39 minutes ago

ಅ.11ರಿಂದ ಉಚ್ಚಿಲ ದಸರಾ ವೈಭವ : ಚಿನ್ನದ ಹೊಳಪಿನಲ್ಲಿ ಕಂಗೊಳಿಸಲಿದೆ ದಸರಾ ದರ್ಬಾರ್ ಮಂಟಪ – vishwanews24

ಉಚ್ಚಿಲ ದಸರಾಗೆ ಭರ್ಜರಿ ಸಿದ್ಧತೆ:ಶಾರದಾ ಮಾತೆ, ನವದುರ್ಗೆಯರ ಆರಾಧನೆಗೆ ಸಜ್ಜು ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ…

54 minutes ago

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ;  ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…

1 hour ago