Featured

ಮೋದಿ ಸರ್ಕಾರದ ಬೆನ್ನಿಗೆ ನಿಂತ ಶಿವ ಸೇನೆ .. ಗೆಲುವು ನಮ್ಮದೇ ಎನ್ನುತಿದೆ ಬಿಜೆಪಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಮನವಿಯನ್ನು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ಅಂಗೀಕರಿಸಿದ್ದು, ಬರುವ ಶುಕ್ರವಾರ ಮೋದಿ ಸರಕಾರ ಮತ್ತು ಪ್ರತಿಪಕ್ಷಗಳ ನಡುವಿನ ‘ಮೇಲಾಟ’ಕ್ಕೆ ಲೋಕಸಭೆ ಸಾಕ್ಷಿಯಾದ ಬೆನ್ನಲ್ಲೇ ಶಿವ ಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವಿಶ್ವಾಸ ಗೊತ್ತುವಳಿಯಲ್ಲಿ ನಾವು ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತೆವೆ ಎಂದು ತಿಳಿಸಿದ್ದಾರೆ ಎಂದು ವರದಿ ಆಗಿದೆ.ಈ ಬಗ್ಗೆ ಅಧಿಕೃತವಾದ ಘೋಷಣೆಯನ್ನು ಸಂಜೆವೇಳೆ ಉದ್ಧವ್ ಠಾಕ್ರೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಎನ್ ಡಿ ಎ ಒಕ್ಕೂಟವನ್ನು ಬೆಂಬಲಿಸುವ ನಿಟ್ಟಿನಲ್ಲಿ ಶಿವ ಸೇನೆ ತನ್ನ ಸಂಸದರಿಗೆ ವಿಪ್ ಕೂಡ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ಕಳೆದ 4 ವರ್ಷಗಳಲ್ಲಿ ಕೈಗೊಂಡಿರುವ ಆರ್ಥಿಕ ಸುಧಾರಣೆ, ಉದ್ಯಮ ಸ್ನೇಹಿ ವಾತಾವರಣ ಹಾಗೂ ಜನ ಕಲ್ಯಾಣ ಯೋಜನೆಗಳಿಂದ ಬೀಗುತ್ತಿರುವ ಬಿಜೆಪಿ ಮತ್ತದರ ಮಿತ್ರಪಕ್ಷಗಳು ಅವಿಶ್ವಾಸ ಗೊತ್ತುವಳಿಯಿಂದ ಸರಕಾರಕ್ಕೆ ಧಕ್ಕೆಯಾಗದು ಎಂಬ ವಿಶ್ವಾಸದಲ್ಲಿವೆ. ಮಿತ್ರಪಕ್ಷಗಳ ಬೆಂಬಲದ ಹೊರತಾಗಿ 273 ಸದಸ್ಯಬಲ ಹೊಂದಿರುವ ಬಿಜೆಪಿಗೂ ಇದು ಚೆನ್ನಾಗಿ ಗೊತ್ತಿರುವುದರಿಂದ ಸವಾಲು ಎದುರಿಸಲು ಸಿದ್ಧ ಎಂದು ಘಂಟಾಘೋಷವಾಗಿ ಹೇಳಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago