ಪಟ್ನಾ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ 40 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿಯಿಂದ ನಟ ಶತ್ರುಘ್ನ ಸಿನ್ಹಾ ಬದಲಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು. ರಫೇಲ್ ಪ್ರಕರಣ, ಜಿಎಸ್‌ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್ ನಿರಾಕರಿಸಿದೆ. ಪಟ್ನಾ ಸಾಹಿಬ್ ಕ್ಷೇತ್ರಕ್ಕೆ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ರಾಧ ಮೋಹನ್ ಸಿಂಗ್, ಪ್ರತಾಪ್ ಸಿಂಗ್ ರೂಡಿ ಅವರಿಗೂ ಟಿಕೇಟ್ ನೀಡಲಾಗಿದೆ. ಎನ್‌ಡಿಎ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಬಿಹಾರ ಬಿಜೆಪಿ ಮುಖ್ಯಸ್ಥ ನಿತ್ಯಾನಂದ ರೈ, ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್, ಎಲ್‌ಜೆಪಿ ವರಿಷ್ಠ ಪಶುಪತಿ ಪರಾಸ್ ಇದ್ದರು.
ಬಿಜೆಪಿ ಮತ್ತು ಜೆಡಿಯು ತಲಾ 17 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಎನ್‌ಡಿಎ ಅಂಗಪಕ್ಷವಾದ ಎಲ್‌ಜೆಪಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…