Featured

ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದ ಶತ್ರುಘ್ನ ಸಿನ್ಹಾಗೆ ಪಾಟ್ನಾ ಸಾಹಿಬ್ ನಿಂದ ಟಿಕೆಟ್ ನಿರಾಕರಿಸಿದ ಬಿಜೆಪಿ – Vishwanews24

ಪಟ್ನಾ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ 40 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿಯಿಂದ ನಟ ಶತ್ರುಘ್ನ ಸಿನ್ಹಾ ಬದಲಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ಪಟ್ನಾ ಸಾಹಿಬ್‌ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು. ರಫೇಲ್‌ ಪ್ರಕರಣ, ಜಿಎಸ್‌ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್‌ ನಿರಾಕರಿಸಿದೆ. ಪಟ್ನಾ ಸಾಹಿಬ್‌ ಕ್ಷೇತ್ರಕ್ಕೆ ರವಿಶಂಕರ್‌ ಪ್ರಸಾದ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ಕೇಂದ್ರ ಸಚಿವರಾದ ಗಿರಿರಾಜ್‌ ಸಿಂಗ್‌, ರಾಧ ಮೋಹನ್‌ ಸಿಂಗ್, ಪ್ರತಾಪ್‌ ಸಿಂಗ್‌ ರೂಡಿ ಅವರಿಗೂ ಟಿಕೇಟ್‌ ನೀಡಲಾಗಿದೆ. ಎನ್‌ಡಿಎ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಬಿಹಾರ ಬಿಜೆಪಿ ಮುಖ್ಯಸ್ಥ ನಿತ್ಯಾನಂದ ರೈ, ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್‌, ಎಲ್‌ಜೆಪಿ ವರಿಷ್ಠ ಪಶುಪತಿ ಪರಾಸ್‌ ಇದ್ದರು.

ಬಿಜೆಪಿ ಮತ್ತು ಜೆಡಿಯು ತಲಾ 17 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಎನ್‌ಡಿಎ ಅಂಗಪಕ್ಷವಾದ ಎಲ್‌ಜೆಪಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

52 minutes ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

1 hour ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

1 hour ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

3 hours ago