ಮೋದಿ ಸರ್ಕಾರವನ್ನು ಸೋಲಿಸುವ ಸಾಮರ್ಥ್ಯ ರಾಹುಲ್ ಗಾಂಧಿ ಅವರಿಗೆ ಇದೆ; ಕಾಂಗ್ರೆಸ್ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು: ಎಂಕೆ ಸ್ಟಾಲಿನ್
ಚೆನ್ನೈ: 2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸುವ ಸಾಮರ್ಥ್ಯ ರಾಹುಲ್ ಗಾಂಧಿ ಅವರಿಗೆ ಇದೆ.. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಪ್ರಸ್ತಾಪ ಮಾಡಿದ್ದಾರೆ.
ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕ ಕರುಣಾನಿಧಿ ಅವರ ಪ್ರತಿಮೆಯನ್ನು ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯ ಮುಂಭಾಗ ಅನಾವರಣ ಮಾಡಲಾಗಿದ್ದು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಟ ಮತ್ತು ರಾಜಕಾರಣಿ ರಜನಿಕಾಂತ್, ಶತ್ರುಘ್ನ ಸಿನ್ಹ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಸಿಎಂ ಮಮತಾ ಬ್ಯಾನರ್ಜಿ ಆಗಮಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.
ಇದೇ ವೇಳೆ ಮಾತನಾಡಿದ ಎಂಕೆ ಸ್ಟಾಲಿನ್, ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ. ಇಂದಿನ ಕಾರ್ಯಕ್ರಮದ ಮೂಲದ ಮುಂದಿನ ವಕ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಘೋಷಿಸುತ್ತಿದ್ದೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಐದು ವರ್ಷಗಳ ಆಡಳಿತದಲ್ಲಿ ಭಾರತ 15 ವರ್ಷಗಳ ಹಿಂದೆ ಹೋಗಿದೆ. ನಾವು ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯನ್ನಾಗಿಸಿದರೇ, ಭಾರತ ಅಭಿವೃದ್ದಿಯಲ್ಲಿ 50 ವರ್ಷ ಹಿಂದೆ ಹೋಗುವ ಸಾಧ್ಯತೆಯಿದೆ. ಹೀಗಾಗಿಯೇ ಕೇಂದ್ರ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭು ಎತ್ತಿ ಕಾಪಾಡುತ್ತೇವೆ ಎಂದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ತಮಿಳುನಾಡಿನಿಂದ ನಾವು ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಗೋಷಿಸುತ್ತೇವೆ. ಭಾರತದ ರಾಜಧಾನಿಯಲ್ಲಿರು ಫ್ಯಾಸಿಸ್ಟ್ ಮೋದಿಯನ್ನು ಸೋಲಿಸಲು ರಾಹುಲ್ ಗಾಂಧಿಯವರೇ ಪ್ರಧಾನಿ ಆಗಬೇಕಿದೆ. ನಾವು ಬಿಜೆಪಿಯನ್ನು ಸೋಲಿಸಿಯೇ ತೀರುತ್ತೇವೆ. ನಮ್ಮ ದೇಶದ ಸಂವಿಧಾನದ ಸ್ವಾಯತತ್ತೆಯನ್ನು ಉಳಿಸುತ್ತೇವೆ ಎಂದರು.ಅಲ್ಲದೇ ಇಂದಿನ ಕಾರ್ಯಕ್ರಮದ ಉದ್ದೇಶ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ಸೋಲಿಸುವುದು ಎಂದರು.

