Featured

ಮೋದಿ ಸರ್ಕಾರವನ್ನು ಸೋಲಿಸುವ ಸಾಮರ್ಥ್ಯ ರಾಹುಲ್ ಗಾಂಧಿ ಅವರಿಗೆ ಇದೆ; ಕಾಂಗ್ರೆಸ್​ ರಾಹುಲ್​​ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು: ಎಂಕೆ ಸ್ಟಾಲಿನ್

ಚೆನ್ನೈ:  2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸುವ ಸಾಮರ್ಥ್ಯ ರಾಹುಲ್ ಗಾಂಧಿ ಅವರಿಗೆ ಇದೆ.. ಕಾಂಗ್ರೆಸ್​ ಅಧ್ಯಕ್ಷ ರಾಹುಲ್​​ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಡಿಎಂಕೆ ಅಧ್ಯಕ್ಷ ಸ್ಟಾಲಿನ್​ ಪ್ರಸ್ತಾಪ ಮಾಡಿದ್ದಾರೆ.

ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕ ಕರುಣಾನಿಧಿ ಅವರ ಪ್ರತಿಮೆಯನ್ನು ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯ ಮುಂಭಾಗ ಅನಾವರಣ ಮಾಡಲಾಗಿದ್ದು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಟ ಮತ್ತು ರಾಜಕಾರಣಿ ರಜನಿಕಾಂತ್, ಶತ್ರುಘ್ನ ಸಿನ್ಹ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಸಿಎಂ ಮಮತಾ ಬ್ಯಾನರ್ಜಿ ಆಗಮಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.

ಇದೇ ವೇಳೆ ಮಾತನಾಡಿದ ಎಂಕೆ ಸ್ಟಾಲಿನ್, ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ. ಇಂದಿನ ಕಾರ್ಯಕ್ರಮದ ಮೂಲದ ಮುಂದಿನ ವಕ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಘೋಷಿಸುತ್ತಿದ್ದೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಐದು ವರ್ಷಗಳ ಆಡಳಿತದಲ್ಲಿ ಭಾರತ 15 ವರ್ಷಗಳ ಹಿಂದೆ ಹೋಗಿದೆ. ನಾವು ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯನ್ನಾಗಿಸಿದರೇ, ಭಾರತ ಅಭಿವೃದ್ದಿಯಲ್ಲಿ 50 ವರ್ಷ ಹಿಂದೆ ಹೋಗುವ ಸಾಧ್ಯತೆಯಿದೆ.  ಹೀಗಾಗಿಯೇ ಕೇಂದ್ರ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭು ಎತ್ತಿ ಕಾಪಾಡುತ್ತೇವೆ ಎಂದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್​ ಅವರು ವಿಶ್ವಾಸ ವ್ಯಕ್ತಪಡಿಸಿದರು.

ತಮಿಳುನಾಡಿನಿಂದ ನಾವು ರಾಹುಲ್​​ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಗೋಷಿಸುತ್ತೇವೆ. ಭಾರತದ ರಾಜಧಾನಿಯಲ್ಲಿರು ಫ್ಯಾಸಿಸ್ಟ್​​ ಮೋದಿಯನ್ನು ಸೋಲಿಸಲು ರಾಹುಲ್​​ ಗಾಂಧಿಯವರೇ ಪ್ರಧಾನಿ ಆಗಬೇಕಿದೆ. ನಾವು ಬಿಜೆಪಿಯನ್ನು ಸೋಲಿಸಿಯೇ ತೀರುತ್ತೇವೆ. ನಮ್ಮ ದೇಶದ ಸಂವಿಧಾನದ ಸ್ವಾಯತತ್ತೆಯನ್ನು ಉಳಿಸುತ್ತೇವೆ ಎಂದರು.ಅಲ್ಲದೇ ಇಂದಿನ ಕಾರ್ಯಕ್ರಮದ ಉದ್ದೇಶ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ಸೋಲಿಸುವುದು ಎಂದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago