ನವದೆಹಲಿ : ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.
ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ.
ಇಂದು ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್ಜೆಪಿ(ರಾಮ್ ವಿಲಾಸ್) 5 ಸ್ಥಾನಗಳನ್ನು ಗೆದ್ದು ಮೋದಿ 3ನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ಡಿಎ) ನಾಯಕರು ಔಪಚಾರಿಕವಾಗಿ ಮೋದಿಯವರ ನಾಯಕತ್ವವನ್ನು ಬೆಂಬಲಿಸಿದ್ದು, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿವೆ ಎಂದು ಉನ್ನತ ರಾಜಕೀಯ ಮೂಲಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…