Featured

ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ಚಂದ್ರಬಾಬು ನಾಯ್ಡು – vishwanews24

ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ಚಂದ್ರಬಾಬು ನಾಯ್ಡು

ನವದೆಹಲಿ : ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.

ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ.

ಇಂದು ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್‌ಜೆಪಿ(ರಾಮ್ ವಿಲಾಸ್) 5 ಸ್ಥಾನಗಳನ್ನು ಗೆದ್ದು ಮೋದಿ 3ನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ನಾಯಕರು ಔಪಚಾರಿಕವಾಗಿ ಮೋದಿಯವರ ನಾಯಕತ್ವವನ್ನು ಬೆಂಬಲಿಸಿದ್ದು, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿವೆ ಎಂದು ಉನ್ನತ ರಾಜಕೀಯ ಮೂಲಗಳು ತಿಳಿಸಿವೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

16 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

16 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

16 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

18 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago