Featured

ಮೋದಿ ಸೋಲಿಸಲು ವಿರೋಧ ಪಕ್ಷಗಳು ಒಟ್ಟಾದರೂ ಚಿಂತೆಯಿಲ್ಲ, ನಮಗೆ ಜನಬಲವಿದೆ!: ಬಿಎಸ್‌ವೈ

ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಕುರಿತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಅಂದಿನ ಮಿತಿಮೀರಿದ ಭ್ರಷ್ಟಾಚಾರದ ಯುಪಿಎ ಆಡಳಿತ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಂದು ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಆಡಳಿತ ನಡೆದಿರುವ ಬಗ್ಗೆಯೂ ತಿಳಿದಿದೆ. ದೇಶದ ಆರ್ಥಿಕತೆಯೂ ಸುಭದ್ರವಾಗಿದೆ. ದೇಶದ ಬೆಳವಣಿಗೆಯಿಂದ ಇಂದು ವಿಶ್ವದಲ್ಲೇ ನಮ್ಮ ರಾಷ್ಟ್ರ ಗೌರವಕ್ಕೆ ಪಾತ್ರವಾಗಿದೆ ಎಂದರು.

ನರೇಂದ್ರ ಮೋದಿ ಅವರ ಅಧಿಕಾರ ತಡೆಯಲು ವಿರೋಧ ಪಕ್ಷಗಳು ಒಗ್ಗೂಡುತ್ತಿವೆ. ಪರಸ್ಪರ ಗಂಭೀರ ಆರೋಪ ಮಾಡಿಕೊಳ್ಳುವ ಪಕ್ಷಗಳೂ ಸಹ ಇಂದು ಮೋದಿ ಅವರ ಭಯದಿಂದಾಗಿ ಒಂದಾಗುತ್ತಿವೆ. ಆದರೆ ನಾವು ಅದಕ್ಕೆಲ್ಲ ಚಿಂತಿಸುವುದಿಲ್ಲ. ನಮಗೆ ಜನಬಲವಿದೆ. ಜತೆಗೆ ದೈವಬಲವೂ ಇದೆ ಎಂದು ಹೇಳಿದರು. 2014ರಲ್ಲಿ ಅಧಿಕಾರಕ್ಕೆ ಬಂದಾಗ ಬಿಜೆಪಿ ದೇಶದ ಆರು ರಾಜ್ಯಗಳಲ್ಲಿ ಆಡಳಿತ ನಡೆಸಿತ್ತು. ಇಂದು 20 ರಾಜ್ಯಗಳಲ್ಲಿ ಬಿಜೆಪಿ ತನ್ನ ಚುಕ್ಕಾಣಿ ಹಿಡಿದಿದೆ, ಇದು ಬಿಜೆಪಿ ಪರ ಜನರ ಒಲವು ತೋರಿಸುತ್ತಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಇರುವ ಸರಕಾರ ನೀವು ಕಾಣಲಿದ್ದೀರಿ ಮತ್ತು ತಮ್ಮ ಅಧಿಕಾರವಧಿಯ ಸಾಧನೆಯ ಕಾರಣದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಜನರು ಮತ್ತೊಮ್ಮೆ ಆಶಿರ್ವಾದಿಸಿ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

2 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

2 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

3 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

3 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

6 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

7 hours ago