ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸೈಬರ್ ಖದೀಮರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಚುನಾವಣೆ ಹೊತ್ತಲ್ಲೇ ನಕಲಿ ಮೆಸೇಜ್‌ಗಳ ಹಾವಳಿ ಸಹ ಹೆಚ್ಚಾಗುತ್ತಿವೆ.
ಚುನಾವಣೆ ಸಂದರ್ಭದಲ್ಲಿ ಪ್ರಧಾನಿಗಳ ಫೋಟೋ ಬಳಸಿ ಫೇಕ್ ಮೆಸೇಜ್ ಹರಿಬಿಡಲಾಗುತ್ತಿದೆ. ಎಲ್ಲರ ಖಾತೆಗೆ ಮೋದಿಯವರ ಕಡೆಯಿಂದ 5,000 ರೂಪಾಯಿ ಅನ್ನೋ ಫೇಕ್ ಮೆಸೇಜ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ.
5,000 ಪಡೆದಿದ್ದೀರಿ, ಇದನ್ನ ನಿಮ್ಮ ಅಕೌಂಟ್‌ಗೆ ಹಾಕಲು ಲಿಂಕ್ ಮಾಡಿ ಎಂಬ ಸಂದೇಶ ಕಳುಹಿಸುತ್ತಾರೆ. ಲಿಂಕ್ ಕ್ಲಿಕ್ ಮಾಡಿದರೆ ಕೂಡಲೇ ಖಾತೆಯಿಂದ ಹಣ ಎಗರಿಸುವಂತೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಈಗಾಗಲೇ ಕುರುಡು ಕಾಂಚಾಣದ ಓಡಾಟ ಸಹ ಜೋರಾಗಿರೋದ್ರಿಂದ ಜನರು ಕೂಡ ಸುಲಭವಾಗಿ ಮೋಸದ ಬಲೆಗೆ ಬೀಳ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಚುನಾವಣಾಧಿಕಾರಿಗಳು ಹಾಗೂ ಸೈಬರ್ ಅಪರಾಧ ವಿಭಾಗಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದೆ.
ಇನ್ನೂ ಈ ರೀತಿಯ ಮೆಸೆಜ್‌ಗಳ ಬಗ್ಗೆ ಸೈಬರ್ ತಜ್ಞರು ಜನರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಕಳ್ಳರು ಸುಲಭವಾಗಿ ತಂತ್ರಜ್ಞಾನವನ್ನ ಬಳಸಿಕೊಂಡು ಸಾಮಾನ್ಯರ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ಅದ್ರೇ ಈಗ ಪ್ರಧಾನಿಗಳ ಫೋಟೋ ಬಳಸಿ ವಂಚಿಸಲು ಮುಂದಾಗಿದ್ದಾರೆ. ಈ ರೀತಿಯ ಮೆಸೇಜ್ ಬಂದಾಗ ಯಾರೂ ಸಹ ರೆಸ್ಪಾಂಡ್ ಮಾಡಬೇಡಿ. ವೈಯಕ್ತಿಕ ಒಟಿಪಿಗಳನ್ನ ಶೇರ್ ಮಾಡಬೇಡಿ. ಅನ್ಯ ಸಂದೇಶಗಳಿಂದ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ತಜ್ಞರು ಸಲಹೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…