ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ವೇಳೆ ಕೆಲವು ನಿಯಮಗಳನ್ನು ಪಾಲಿಸುತ್ತಿದ್ದು, ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ವಿದೇಶ ಪ್ರವಾಸ ವೇಳೆ ಇಂಧನ ತುಂಬಿಸಿಕೊಳ್ಳಲು ವಿಮಾನ ಯಾವುದೇ ದೇಶದಲ್ಲಿ ತಾಂತ್ರಿಕವಾಗಿ ತಂಗಿದಾಗ ರಾತ್ರಿ ವೇಳೆ ಹೊಟೇಲ್ನಲ್ಲಿ ವಾಸ್ತವ್ಯವಿರುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಇಂಥ ಸಂದರ್ಭದ ಲ್ಲಿ ಮೋದಿ ಹೊಟೇಲ್ ರೂಮ್ ಬುಕ್ ಮಾಡುವುದಿಲ್ಲ. ವಿಮಾನ ನಿಲ್ದಾಣದ ಟರ್ವಿುನಲ್ನಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಾರೆ. ಪ್ರಧಾನಿ ಜೊತೆ ತೆರಳುವ ಅಧಿಕಾರಿಗಳ ಸಂಖ್ಯೆಯನ್ನು ಶೇ. 20ಕ್ಕೆ ಇಳಿಸಲಾಗಿದೆ. ಸಿಬ್ಬಂದಿಗಾಗಿ ಪ್ರತ್ಯೇಕ ವಾಹನ ವ್ಯವಸ್ಥೆ ಇರುತ್ತದೆ. ನಾಲ್ಕರಿಂದ ಐದು ಜನರು ಪ್ರಯಾಣಿಸಬಹುದಾದ ಕಾರ್ ಅಥವಾ ಬಸ್ ವ್ಯವಸ್ಥೆ ಮಾಡಬೇಕೆಂದು ಮೋದಿ ಸೂಚಿಸಿದ್ದಾಗಿ ಷಾ ತಿಳಿಸಿದರು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಆಗ ವಿಮಾನಕ್ಕೆ ಇಂಧನ ತುಂಬಿಸುವ ಸಲುವಾಗಿ ರಾತ್ರಿ ಉಳಿದುಕೊಳ್ಳಲು ಹೋಟೆಲ್ ಬುಕ್ ಮಾಡಲಾಗಿತ್ತು. ಆದರೆ ಮೋದಿಯವರು ಹೋಟೆಲ್‍ನಲ್ಲಿ ಉಳಿದುಕೊಳ್ಳಲಿಲ್ಲ, ಬದಲಿಗೆ ವಿಮಾನ ನಿಲ್ದಾಣದ ಟರ್ಮಿನಲ್‍ನಲ್ಲಿಯೇ ಉಳಿದುಕೊಂಡಿದ್ದರು. ಪ್ರಧಾನಿ ಮೋದಿ ಈ ವರೆಗೆ ವಿಮಾನದಲ್ಲಿ ತಾಂತ್ರಿಕ ದೋಷವಾದಾಗ ಹೋಟೆಲ್ ಬುಕ್ ಮಾಡಿಕೊಂಡು ಉಳಿದಿಲ್ಲ ಎಂದು ಶಾ ತಿಳಿಸಿದರು.
ಸ್ವತಃ ಪ್ರಧಾನಿಯವರೇ ಇಂಥ ನಿಯಮಗಳನ್ನು ಪಾಲಿಸುತ್ತಿರುವಾಗ ಇನ್ನೊಂದೆಡೆ ಕೆಲವರು ಭದ್ರತಾ ವ್ಯವಸ್ಥೆಯನ್ನೇ ಪ್ರತಿಷ್ಠೆ ಸಂಕೇತ ಮಾಡಿಕೊಂಡಿದ್ದರು ಎಂದು ಶಾ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…