Featured

ಮೋದಿ 5 ಸ್ಟಾರ್ ಹೋಟೆಲ್ ಬಳಸಲ್ಲ, ವಿಮಾನ ನಿಲ್ದಾಣದ ಟರ್ಮಿನಲ್‍ನಲ್ಲೇ ಉಳಿಯುತ್ತಾರೆ : ಪ್ರಧಾನಿ ವಿದೇಶ ಪ್ರವಾಸದ ಬಗ್ಗೆ ಅಮಿತ್ ಶಾ ವಿವರಣೆ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ವೇಳೆ ಕೆಲವು ನಿಯಮಗಳನ್ನು ಪಾಲಿಸುತ್ತಿದ್ದು, ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.

ವಿದೇಶ ಪ್ರವಾಸ ವೇಳೆ ಇಂಧನ ತುಂಬಿಸಿಕೊಳ್ಳಲು ವಿಮಾನ ಯಾವುದೇ ದೇಶದಲ್ಲಿ ತಾಂತ್ರಿಕವಾಗಿ ತಂಗಿದಾಗ ರಾತ್ರಿ ವೇಳೆ ಹೊಟೇಲ್​ನಲ್ಲಿ ವಾಸ್ತವ್ಯವಿರುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಇಂಥ ಸಂದರ್ಭದ ಲ್ಲಿ ಮೋದಿ ಹೊಟೇಲ್ ರೂಮ್ ಬುಕ್ ಮಾಡುವುದಿಲ್ಲ. ವಿಮಾನ ನಿಲ್ದಾಣದ ಟರ್ವಿುನಲ್​ನಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಾರೆ. ಪ್ರಧಾನಿ ಜೊತೆ ತೆರಳುವ ಅಧಿಕಾರಿಗಳ ಸಂಖ್ಯೆಯನ್ನು ಶೇ. 20ಕ್ಕೆ ಇಳಿಸಲಾಗಿದೆ. ಸಿಬ್ಬಂದಿಗಾಗಿ ಪ್ರತ್ಯೇಕ ವಾಹನ ವ್ಯವಸ್ಥೆ ಇರುತ್ತದೆ. ನಾಲ್ಕರಿಂದ ಐದು ಜನರು ಪ್ರಯಾಣಿಸಬಹುದಾದ ಕಾರ್ ಅಥವಾ ಬಸ್ ವ್ಯವಸ್ಥೆ ಮಾಡಬೇಕೆಂದು ಮೋದಿ ಸೂಚಿಸಿದ್ದಾಗಿ ಷಾ ತಿಳಿಸಿದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಆಗ ವಿಮಾನಕ್ಕೆ ಇಂಧನ ತುಂಬಿಸುವ ಸಲುವಾಗಿ ರಾತ್ರಿ ಉಳಿದುಕೊಳ್ಳಲು ಹೋಟೆಲ್ ಬುಕ್ ಮಾಡಲಾಗಿತ್ತು. ಆದರೆ ಮೋದಿಯವರು ಹೋಟೆಲ್‍ನಲ್ಲಿ ಉಳಿದುಕೊಳ್ಳಲಿಲ್ಲ, ಬದಲಿಗೆ ವಿಮಾನ ನಿಲ್ದಾಣದ ಟರ್ಮಿನಲ್‍ನಲ್ಲಿಯೇ ಉಳಿದುಕೊಂಡಿದ್ದರು. ಪ್ರಧಾನಿ ಮೋದಿ ಈ ವರೆಗೆ ವಿಮಾನದಲ್ಲಿ ತಾಂತ್ರಿಕ ದೋಷವಾದಾಗ ಹೋಟೆಲ್ ಬುಕ್ ಮಾಡಿಕೊಂಡು ಉಳಿದಿಲ್ಲ ಎಂದು ಶಾ ತಿಳಿಸಿದರು.

ಸ್ವತಃ ಪ್ರಧಾನಿಯವರೇ ಇಂಥ ನಿಯಮಗಳನ್ನು ಪಾಲಿಸುತ್ತಿರುವಾಗ ಇನ್ನೊಂದೆಡೆ ಕೆಲವರು ಭದ್ರತಾ ವ್ಯವಸ್ಥೆಯನ್ನೇ ಪ್ರತಿಷ್ಠೆ ಸಂಕೇತ ಮಾಡಿಕೊಂಡಿದ್ದರು ಎಂದು ಶಾ ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago