ನವದೆಹಲಿ: ಪ್ರಧಾನಿ ಮೋದಿ ಅವರು ಆರ್ಎಸ್ಎಸ್ನ ಪ್ರಚಾರಕ್ ಸಂಸ್ಕಾರಕ್ಕೆ ಬದ್ಧರಾಗಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮೋದಿ ಅವರು RSS ಪ್ರಚಾರಕ್ ಸಂಸ್ಕಾರಕ್ಕೆ ಬದ್ಧರಾಗಿ, ಸೆಪ್ಟೆಂಬರ್ 17 ರಂದು ತಮ್ಮ 75 ನೇ ವರ್ಷದ ಹುಟ್ಟುಹಬ್ಬದ ನಂತರ ಮಾರ್ಗದರ್ಶನ ಮಂಡಲಕ್ಕೆ ನಿವೃತ್ತಿ ಘೋಷಿಸದಿದ್ದರೆ, ಅವರು ಇತರ ವಿಧಾನಗಳಿಂದ ತಮ್ಮ ಪ್ರಧಾನಿ ಕುರ್ಚಿಯನ್ನು ಕಳೆದುಕೊಳ್ಳುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಹೆಸರುವಾಗಿಯಾಗಿರುವ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಮೋದಿ ಸರ್ಕಾರದ GDP ಬೆಳವಣಿಗೆಯ ಹಕ್ಕು ಸಾರ್ವಜನಿಕರಿಗೆ ದೊಡ್ಡ ವಂಚನೆಯಾಗಿದೆ. ಕೆಳಗಿನ ಅಂಕಿಅಂಶಗಳು 2014 ರಿಂದ ಸರಾಸರಿ GDP ಬೆಳವಣಿಗೆಯನ್ನು ವರ್ಷಕ್ಕೆ ಕೇವಲ 5 % ಮತ್ತು 2016 ರಿಂದ ವರ್ಷಕ್ಕೆ 3.7 %ಗೆ ಇಳಿದಿದೆ ಎಂದು ಟ್ವೀಟ್ ಮಾಡಿ ಮೋದಿ ಸರ್ಕಾರ ಹಾಗೂ ಅದರ ನೀತಿಗಳ ವಿರುದ್ಧ ಗುಡುಗಿದ್ದರು. ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನಾನು ಕೋರ್ಟ್ ಮೆಟ್ಟಿಲೇರಿರುವುದು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ರಾಷ್ಟ್ರೀಯ ಕಾಳಜಿಯ ವಿಷಯ ಎಂದು ಹಿರಿಯ ಬಿಜೆಪಿ ನಾಯಕ ಹೇಳಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…