Featured

ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ , ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ : ಸುಬ್ರಮಣಿಯನ್ ಸ್ವಾಮಿ – vishwanews24

ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ , ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ : ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪ್ರಧಾನಿ ಮೋದಿ ಅವರು ಆರ್​ಎಸ್​ಎಸ್​ನ ಪ್ರಚಾರಕ್​ ಸಂಸ್ಕಾರಕ್ಕೆ ಬದ್ಧರಾಗಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮೋದಿ ಅವರು RSS ಪ್ರಚಾರಕ್​ ಸಂಸ್ಕಾರಕ್ಕೆ ಬದ್ಧರಾಗಿ, ಸೆಪ್ಟೆಂಬರ್ 17 ರಂದು ತಮ್ಮ 75 ನೇ ವರ್ಷದ ಹುಟ್ಟುಹಬ್ಬದ ನಂತರ ಮಾರ್ಗದರ್ಶನ ಮಂಡಲಕ್ಕೆ ನಿವೃತ್ತಿ ಘೋಷಿಸದಿದ್ದರೆ, ಅವರು ಇತರ ವಿಧಾನಗಳಿಂದ ತಮ್ಮ ಪ್ರಧಾನಿ ಕುರ್ಚಿಯನ್ನು ಕಳೆದುಕೊಳ್ಳುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಹೆಸರುವಾಗಿಯಾಗಿರುವ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್​ ಸ್ವಾಮಿ, ಮೋದಿ ಸರ್ಕಾರದ GDP ಬೆಳವಣಿಗೆಯ ಹಕ್ಕು ಸಾರ್ವಜನಿಕರಿಗೆ ದೊಡ್ಡ ವಂಚನೆಯಾಗಿದೆ. ಕೆಳಗಿನ ಅಂಕಿಅಂಶಗಳು 2014 ರಿಂದ ಸರಾಸರಿ GDP ಬೆಳವಣಿಗೆಯನ್ನು ವರ್ಷಕ್ಕೆ ಕೇವಲ 5 % ಮತ್ತು 2016 ರಿಂದ ವರ್ಷಕ್ಕೆ 3.7 %ಗೆ ಇಳಿದಿದೆ ಎಂದು ಟ್ವೀಟ್​ ಮಾಡಿ ಮೋದಿ ಸರ್ಕಾರ ಹಾಗೂ ಅದರ ನೀತಿಗಳ ವಿರುದ್ಧ ಗುಡುಗಿದ್ದರು. ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ.

ಕೆಲ ದಿನಗಳ ಹಿಂದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್​ ಸ್ವಾಮಿ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ನಾನು ಕೋರ್ಟ್​ ಮೆಟ್ಟಿಲೇರಿರುವುದು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ರಾಷ್ಟ್ರೀಯ ಕಾಳಜಿಯ ವಿಷಯ ಎಂದು ಹಿರಿಯ ಬಿಜೆಪಿ ನಾಯಕ ಹೇಳಿದ್ದರು.

 

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

7 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

7 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

10 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago