ಮಂಗಳೂರು: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯ ಸಂಕಲ್ಪ ಈಡೇರಿದ ಸಂಭ್ರಮಾಚರಣೆಗೆ ಯಕ್ಷಗಾನ ಬುಕ್ಕಿಂಗ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಮೋ ಎಗೈನ್ ತಂಡದ ಮುಖ್ಯಸ್ಥ ನರೇಶ್ ಶೆಣೈ ಈ ಬಗ್ಗೆ ಮಾತನಾಡಿ, ದೇಶದಲ್ಲಿ ಬಿಜೆಪಿ ಅಲೆಯಿರುವುದು ಸ್ಪಷ್ಟವಾಗಿದೆ. ದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮೋದಿ ಪ್ರಧಾನಿಯಾಗಬೇಕೆಂಬ ಅಭಿಲಾಷೆಯಿಂದ ಕಟೀಲು ದೇವಿಗೆ ಯಕ್ಷಗಾನ ಹರಕೆ ಹೇಳಿದ್ದೇವೆ. ಕಟೀಲು ಮಾತೆಯ ಅನುಗ್ರಹದಿಂದ ಮೋದೀಜಿ ಮತ್ತೆ ಪ್ರಧಾನಿಯಾಗುವ ಎಲ್ಲ ವಿಶ್ವಾಸ ವ್ಯಕ್ತವಾಗಿದೆ. ಅದಕ್ಕಾಗಿ ಈ ವರ್ಷವೇ ಯಕ್ಷಗಾನ ನಡೆಸುವ ಉದ್ದೇಶದಿಂದ ಫಲಿತಾಂಶದ ಮರುದಿನವೇ ಯಕ್ಷಗಾನ ನಡೆಸುವ ಉದ್ದೇಶದಿಂದ ಮುಂಚಿತವಾಗಿಯೇ ಯಕ್ಷಗಾನ ಬುಕ್ಕಿಂಗ್ ಮಾಡಲಾಗಿದೆ ಎಂದು ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದಿಂದ ಮೇ 24ರ ಶುಕ್ರವಾರ ರಾತ್ರಿ 8.30ರಿಂದ ಮಂಗಳೂರಿನ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮ್ಯಂ ಎಂಬ ಪುಣ್ಯ ಕಥಾ ಪ್ರಸಂಗ ನಡೆಯಲಿದೆ. ಚೌಕಿ ಪೂಜೆಯ ಬಳಿಕ ಅನ್ನಪ್ರಸಾದವೂ ನಡೆಯಲಿದೆ ಎಂದು ಆಮಂತ್ರಣ ಮುದ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…