Featured

ಮೋದೀಜಿ ಮತ್ತೆ ಪ್ರಧಾನಿಯಾಗುವ ವಿಶ್ವಾಸದಿಂದ ಫಲಿತಾಂಶದ ಮರುದಿನ ಕಟೀಲು ದೇವಿಗೆ ಹರಕೆಯ ಯಕ್ಷಗಾನ ಬುಕ್ಕಿಂಗ್..Vishwanews24

ಮಂಗಳೂರು: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯ ಸಂಕಲ್ಪ ಈಡೇರಿದ ಸಂಭ್ರಮಾಚರಣೆಗೆ ಯಕ್ಷಗಾನ ಬುಕ್ಕಿಂಗ್‌ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದೇಶಾದ್ಯಂತ ಲೋಕಸಭಾ ಚುನಾವಣೆ ಕಾವೇರಿದ್ದು, 4ನೇ ಹಂತದ ಚುನಾವಣೆ ಮುಗಿದು 5ನೇ ಹಂತದ ಚುನಾವಣೆ ಸೋಮವಾರ ನಡೆದಿದೆ. ಇನ್ನೂ ಎರಡು ಹಂತದ ಚುನಾವಣೆ ಬಾಕಿಯಿದ್ದು, ದೇಶದ ಜನತೆ ಚುನಾವಣಾ ಫಲಿತಾಂಶಕ್ಕೆ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಈತನ್ಮಧ್ಯೆ ಮಂಗಳೂರಿನಲ್ಲಿ ‘ನಮೋ ಎಗೈನ್‌, ನಮೋ ಫಿರ್‌ಸೇ, ಟೀಮ್‌ಮೋದಿ, ನಮೋ ಮಿಷನ್‌400 ಪ್ಲಸ್‌’ ಟೀಮ್‌ ದೇಶಾದ್ಯಂತ ಬಿಜೆಪಿ ಜಯಭೇರಿ ಬಾರಿಸಿ ಬಹುಮತದೊಂದಿಗೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ವಿಜಯ ಸಂಕಲ್ಪ ಯಕ್ಷಗಾನ ಬುಕ್ಕಿಂಗ್‌ ಮಾಡಿದೆ.

ನಮೋ ಎಗೈನ್‌ ತಂಡದ ಮುಖ್ಯಸ್ಥ ನರೇಶ್‌ ಶೆಣೈ ಈ ಬಗ್ಗೆ ಮಾತನಾಡಿ, ದೇಶದಲ್ಲಿ ಬಿಜೆಪಿ ಅಲೆಯಿರುವುದು ಸ್ಪಷ್ಟವಾಗಿದೆ. ದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮೋದಿ ಪ್ರಧಾನಿಯಾಗಬೇಕೆಂಬ ಅಭಿಲಾಷೆಯಿಂದ ಕಟೀಲು ದೇವಿಗೆ ಯಕ್ಷಗಾನ ಹರಕೆ ಹೇಳಿದ್ದೇವೆ. ಕಟೀಲು ಮಾತೆಯ ಅನುಗ್ರಹದಿಂದ ಮೋದೀಜಿ ಮತ್ತೆ ಪ್ರಧಾನಿಯಾಗುವ ಎಲ್ಲ ವಿಶ್ವಾಸ ವ್ಯಕ್ತವಾಗಿದೆ. ಅದಕ್ಕಾಗಿ ಈ ವರ್ಷವೇ ಯಕ್ಷಗಾನ ನಡೆಸುವ ಉದ್ದೇಶದಿಂದ ಫಲಿತಾಂಶದ ಮರುದಿನವೇ ಯಕ್ಷಗಾನ ನಡೆಸುವ ಉದ್ದೇಶದಿಂದ ಮುಂಚಿತವಾಗಿಯೇ ಯಕ್ಷಗಾನ ಬುಕ್ಕಿಂಗ್‌ ಮಾಡಲಾಗಿದೆ ಎಂದು ಹೇಳಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದಿಂದ ಮೇ 24ರ ಶುಕ್ರವಾರ ರಾತ್ರಿ 8.30ರಿಂದ ಮಂಗಳೂರಿನ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮ್ಯಂ ಎಂಬ ಪುಣ್ಯ ಕಥಾ ಪ್ರಸಂಗ ನಡೆಯಲಿದೆ. ಚೌಕಿ ಪೂಜೆಯ ಬಳಿಕ ಅನ್ನಪ್ರಸಾದವೂ ನಡೆಯಲಿದೆ ಎಂದು ಆಮಂತ್ರಣ ಮುದ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago