Featured

ಮೌಲ್ಯಯುತವಾದ ಆಧಾರ್ ಕಾರ್ಡ್ ಅನ್ನು ಹೊಂದುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24

ಮೌಲ್ಯಯುತವಾದ ಆಧಾರ್ ಕಾರ್ಡ್ ಅನ್ನು ಹೊಂದುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ– ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು.

  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

  ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸುತ್ತಿದೆ. ಎಲ್ಲರೂ ಈ ಗುರುತಿನ ಚೀಟಿಯನ್ನು ಹೊಂದಬೇಕು. ಆಧಾರ್ ಗುರುತಿನ ಚೀಟಿ ಹೊಂದದೇ ಇರುವವರು ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಬೇಕು. ಕಡ್ಡಾಯ ಬಯೋ ಮೆಟ್ರಿಕ್, ನವೀಕರಣ ಹಾಗೂ ಸ್ಯಾಚುರೇಷನ್ ಗೊಳಿಸುವುದರೊಂದಿಗೆ ಮೌಲ್ಯಯುತವಾದ ಆಧಾರ್ ಕಾರ್ಡ್ ಹೊಂದಬೇಕು ಎಂದರು.

   ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು 2,07,021, 18 ವರ್ಷ ಮೇಲ್ಪಟ್ಟ 11,73,636 ಜನರು ಆಧಾರ್ ಕಾರ್ಡ್ ಅನ್ನು ಪಡೆದಿದ್ದಾರೆ. ರಾಜ್ಯ ಆಧಾರ್ ನೋಂದಣಿ ಪ್ರಾಧಿಕಾರವು ಜಿಲ್ಲೆಯ ಆಯ್ದ ಬ್ಯಾಂಕ್‌ಗಳು, ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕಚೇರಿ ಸಮಯದಲ್ಲಿ ಸಾರ್ವಜನಿಕರು ಆಧಾರ್ ಸೇವೆಯನ್ನು ಪಡೆಯಬಹುದಾಗಿದೆ ಎಂದರು.

  ಕಳೆದ 10 ವರ್ಷಗಳ ಹಿಂದೆ ಆಧಾರ್ ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರು ಗುರುತಿನ ಹಾಗೂ ವಿಳಾಸ ದಾಖಲೆಯನ್ನು ಸಮೀಪದ ಆಧಾರ್ ಕೇಂದ್ರದಲ್ಲಿ ಮರು ಅಪ್ಲೋಡ್ ಮಾಡಿ ನೊಂದಣಿ ಮಾಡಿಕೊಳ್ಳಬೇಕು. ಇದನ್ನು myAadhaar.uidai.gov.in. ನಲ್ಲಿ ಆನ್‌ಲೈನ್ ಮೂಲಕವಾಗಿ ನೇರವಾಗಿ ನವಿಕರಿಸಲು ಅವಕಾಶವಿದೆ. ಇದರ ಉಪಯೋಗ ಪಡೆದುಕೊಳ್ಳಬೇಕು. ಒಂದೊಮ್ಮೆ ನವೀಕರಿಸದೆ ಇದ್ದಲ್ಲಿ ಆಧಾರ್ ಕಾರ್ಡ್ ನಿಷ್ಕಿçÃಯಗೊಳ್ಳುತ್ತದೆ. ಇದರಿಂದ ಸೌಲಭ್ಯ ಅಥವಾ ಸೇವೆ ಪಡೆಯಲು ಅನಾನುಕೂಲವಾಗುತ್ತದೆ ಎಂದರು.

  ಪ್ರತಿಯೊಬ್ಬರೂ ಆಧಾರ್ ಬಯೋಮೆಟ್ರಿಕ್ ನವೀಕರಣ ಮಾಡಿಸಿಕೊಳ್ಳಬೇಕು.  ಇದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟವರು 38,680 ಜನರು, 15 ವರ್ಷ ಮೇಲ್ಪಟ್ಟ 38,188 ಜನ ಸೇರಿದಂತೆ ಒಟ್ಟು 76,868 ಜನರು ನವೀಕರಿಸಿಕೊಳ್ಳಬೇಕಿದೆ. ಈ ಬಗ್ಗೆ ಹೆಚ್ಚಿನಪ್ರಚಾರ ನೀಡಿ ನವೀಕರಣಗೊಳಿಸಲು ಉತ್ತೇಜಿಸಬೇಕು. ಶಾಲಾ ವಿದ್ಯಾರ್ಥಿಗಳಿದ್ದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ನಿಯೋಜಿಸಿ, ಬಯೋಮೆಟ್ರಿಕ್ ಮಾಡಿಸಬೇಕು ಎಂದು ಸೂಚನೆ ನೀಡಿದರು.   

ಹೊರದೇಶಗಳಿಂದ ಬಂದಿರುವ ಜನರು ಸಹ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಆಧಾರ್ ನೋಂದಣಿಗೆ ಮುಂದಾಗುವ ಸಾಧ್ಯತೆ ಗಳಿರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದ ಅವರು, ಕೆಲವರು ನಕಲಿ ಆಧಾರ್ ಪ್ರತಿಗಳನ್ನು ಹೊಂದಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿರುತ್ತವೆ. ಇವುಗಳ ಬಗ್ಗೆ ಪರಿಶೀಲನೆ ಯನ್ನು ಆಗಿಂದಾಗ್ಗೆ ಮಾಡಬೇಕು ಎಂದರು.  

  5 ವರ್ಷದೊಳಗಿನ ಮಕ್ಕಳು ಹೊಸದಾಗಿ ಆಧಾರ್ ಕಾರ್ಡ್ ನೊಂದಣಿಯನ್ನು ಸಮೀಪದ ಅಂಚೆ ಕಚೇರಿ, ತಾಲೂಕು ಕಚೇರಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಅವಶ್ಯ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದರು.

   ಆಧಾರ್ ಕಾರ್ಡ್ ಹೊಂದಿದವರು ಮರಣ ಹೊಂದಿದ್ದಲ್ಲಿ ಅವರ ಕಾನೂನು ಬದ್ಧ ವಾರಾಸುದಾರರು ಅವರ ಮರಣ ಪ್ರಮಾಣ ಪತ್ರವನ್ನು ನೀಡಿ, ಆಧಾರ್ ಕಾರ್ಡ್ ಅನ್ನು ತಪ್ಪದೇ ರದ್ದುಪಡಿಸಬೇಕು. ರದ್ದುಪಡಿಸದೇ ಇದ್ದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಇದರ ಉಪಯೋಗ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಈ ರೀತಿ ಆದಲ್ಲಿ ಕಾನೂನುಬದ್ಧ ವಾರಸುದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಭೆಯಲ್ಲಿ ಯು.ಐ.ಡಿ.ಎ.ಐ ಡೈರೆಕ್ಟರ್ ಮನೋಜ್ ಕುಮಾರ್, ಯು.ಐ.ಡಿ.ಎ.ಐ ಅಸಿಸ್ಟೆಂಟ್ ಮ್ಯಾನೆಜರ್ ಮೊಹಮ್ಮದ್ ಮೂಸಾಬ್, ರಿಕೇಶ್, ಡಿಡಿಪಿಯು ಗಣಪತಿ, ಡಿಡಿಪಿಐ ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago