ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಾಖಲೆಗಳಲ್ಲಿರುವ “ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರನ್ನು ತೆಗೆದು ಇದೀಗ “ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.
ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ “ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ “ಮ್ಯಾಂಗಲೋರ್’ ಎಂದೇ ಉಲ್ಲೇಖ ಬಾಕಿಯಾಗಿತ್ತು. ಮಂಗಳೂರು ನಗರದಲ್ಲಿಯೂ “ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಾಗೂ ದೇಶ-ವಿದೇಶದ ಪಾಲುದಾರರ ನಡುವಿನ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ. ಡಿ. 1 ರಿಂದ ಇದು ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿದೆ.
ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ ಉಡುಪಿ : 2026 ನೇ ಸಾಲಿನ…
ಉಡುಪಿ: ಯುವತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…
ಉಡುಪಿ : ಏ. 17 ರಂದು ನೇರ ಸಂದರ್ಶನ ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ…
ಉಡುಪಿ : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ…
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…