ಕಾರ್ಕಳ:ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನ ಮಾಡಿದ್ದು, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಕನ್ನಡ ಸಂಸ್ಕ್ರತಿ ಇಲಾಖೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಯಕ್ಷಗಾನ ಒಂದು ದೈವಿಕ ಕಲೆ. ದಕ್ಷಿಣೋತ್ತರ ಕನ್ನಡದ ಸಾವಿರಾರು ಕಲಾವಿದರು ವ್ಯವಸಾಯಿ ಮೇಳ ಹಾಗೂ ಹವ್ಯಾಸಿ ಕಲಾವಿದರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ತಮ್ಮ ಬಿಡುಬೀಸು ಹೇಳಿಕೆಯಿಂದ ಒಂದು ಕಲಾಪ್ರಕಾರವನ್ನೇ ಅಸಹ್ಯವಾಗಿಸುವ ಪ್ರಯತ್ನವನ್ನು ಬಿಳಿಮಲೆ ನಡೆಸಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಹುತಾತ್ಮ ಸೈನಿಕರ ಜಾತಿ ಹುಡುಕಿ ವಿವಾದ ಸೃಷ್ಟಿಸಿದ್ದ ಬಿಳಿಮಲೆಯವರು ಈಗ ಯಕ್ಷಗಾನ ಕಲಾವಿದರ ಬಗ್ಗೆ ಅದೇ ಅಪಸವ್ಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಕ್ಕೆ ಸಾಧ್ಯವಿಲ್ಲ. ಇದು ಇಡಿ ಕಲಾ ಪ್ರಕಾರವನ್ನು ಮುಜುಗರಕ್ಕೆ ದೂಡುವ ಕೃತ್ಯ ಎಂದು ಟೀಕಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇಂಥ ಹೇಳಿಕೆ ನೀಡುವಾಗ ಸಮಷ್ಠಿ ಜವಾಬ್ದಾರಿ ಪ್ರದರ್ಶಿಸಬೇಕಿತ್ತು. ಸ್ಥಾನ ಗೌರವವನ್ನು ಅರಿಯಬೇಕಿತ್ತು. ಆದರೆ ಬಿಳಿಮಲೆಯವರು ತಮ್ಮ ಎಂದಿನ ಮಾತಿನ ಚಪಲ ಪ್ರದರ್ಶಿಸಿದ್ದಾರೆ. ಈ ಬೇಜವಾಬ್ದಾರಿ ವರ್ತನೆಗಾಗಿ ಸರ್ಕಾರ ಅವರನ್ನು ತಕ್ಷಣ ಪ್ರಾಧಿಕಾರದ ಜವಾಬ್ದಾರಿಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…