ಉಡುಪಿ: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ ಸುವರ್ಣರ ಮಾರ್ಗದರ್ಶನದಲ್ಲಿ ಹಿಂದಿ ಯಕ್ಷಗಾನದ ಶಿಬಿರ ಏರ್ಪಟ್ಟಿದೆ.
ಕನ್ನಡದ ಕಲೆ ಯಕ್ಷಗಾನಕ್ಕೆ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳೇ ಮನಸೋತಿದ್ದಾರೆ. ಭವಿಷ್ಯದ ಚಲನಚಿತ್ರರಂಗ ಮತ್ತು ಟಿವಿ ಪರದೆಯನ್ನು ಅಲಂಕರಿಸದಿರುವ ಯುವ ಕಲಾವಿದರು 20 ದಿನಗಳಿಂದ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ. ಗುರುಬನಂಜೆ ಸಂಜೀವ ಸುವರ್ಣ ಅವರು, ಸಾಂಪ್ರದಾಯಿಕ ಹೆಜ್ಜೆಗಾರಿಕೆಯನ್ನು ಕಲಿಸುವುದರ ಜೊತೆಗೆ ಯಕ್ಷಗಾನ ಪ್ರದರ್ಶನಕ್ಕೆ ಈ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
ಪ್ರತಿದಿನ ಹನ್ನೆರಡು ಗಂಟೆಗೂ ಅಧಿಕ ಕಾಲ ವಿದ್ಯಾರ್ಥಿಗಳು ಬೆವರಿಳಿಸಿ ಯಕ್ಷಗಾನದ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ. ರಾಷ್ಟ್ರೀಯ ನಾಟಕ ಶಾಲೆಯ ಕಲಿಕೆಯ ಭಾಗವಾಗಿ ಕಳೆದ ಹಲವಾರು ವರ್ಷಗಳಿಂದ ಯಕ್ಷಗಾನವನ್ನು ಒಂದು ಪಠ್ಯವಾಗಿ ಕಲಿಸಲಾಗುತ್ತದೆ.
ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದ್ದು, ದೇಶದ ನಾನಾ ಭಾಗಗಳ ಕಲಾವಿದರು ಅಪರೂಪದ ಕರಾವಳಿಯ ಕಲೆಯನ್ನು ಅಭ್ಯಸಿಸುವಂತಾಗಿದೆ. ಅದಮಾರು ಮಠದ ಆಶ್ರಯದಲ್ಲಿ ಈ ಶಿಬಿರ ಏರ್ಪಟ್ಟಿದ್ದು, ಗಾನನಾಟ್ಯ ಸಂಭಾಷಣೆಯ ಅಪರೂಪದ ಕಲೆ ದೇಶದ ಮೂಲೆ ಮೂಲೆಗಳಿಂದ ಕಲಾವಿದರನ್ನು ಆಕರ್ಷಿಸುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…