Featured

ಯಕ್ಷಗಾನ ಕಲಿಯಲು ವಾರಣಾಸಿ ಕ್ಷೇತ್ರದ ನಾಟಕ ಶಾಲೆಯ ವಿದ್ಯಾರ್ಥಿಗಳು ಕೃಷ್ಣ ನಗರಿ ಉಡುಪಿಗೆ  – vishwanews24

ಯಕ್ಷಗಾನ ಕಲಿಯಲು ಕೃಷ್ಣ ನಗರಿ ಉಡುಪಿಗೆ ಬಂದ ವಾರಣಾಸಿ ಕ್ಷೇತ್ರದ ನಾಟಕ ಶಾಲೆಯ ವಿದ್ಯಾರ್ಥಿಗಳು

ಉಡುಪಿ: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ.  ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ ಸುವರ್ಣರ ಮಾರ್ಗದರ್ಶನದಲ್ಲಿ ಹಿಂದಿ ಯಕ್ಷಗಾನದ ಶಿಬಿರ ಏರ್ಪಟ್ಟಿದೆ.

ಕನ್ನಡದ ಕಲೆ ಯಕ್ಷಗಾನಕ್ಕೆ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳೇ ಮನಸೋತಿದ್ದಾರೆ. ಭವಿಷ್ಯದ ಚಲನಚಿತ್ರರಂಗ ಮತ್ತು ಟಿವಿ ಪರದೆಯನ್ನು ಅಲಂಕರಿಸದಿರುವ ಯುವ ಕಲಾವಿದರು 20 ದಿನಗಳಿಂದ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ. ಗುರುಬನಂಜೆ ಸಂಜೀವ ಸುವರ್ಣ ಅವರು, ಸಾಂಪ್ರದಾಯಿಕ ಹೆಜ್ಜೆಗಾರಿಕೆಯನ್ನು‌ ಕಲಿಸುವುದರ ಜೊತೆಗೆ ಯಕ್ಷಗಾನ ಪ್ರದರ್ಶನಕ್ಕೆ ಈ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತಿದ್ದಾರೆ.

ಪ್ರತಿದಿನ ಹನ್ನೆರಡು ಗಂಟೆಗೂ ಅಧಿಕ ಕಾಲ ವಿದ್ಯಾರ್ಥಿಗಳು ಬೆವರಿಳಿಸಿ ಯಕ್ಷಗಾನದ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ. ರಾಷ್ಟ್ರೀಯ ನಾಟಕ ಶಾಲೆಯ ಕಲಿಕೆಯ ಭಾಗವಾಗಿ ಕಳೆದ ಹಲವಾರು ವರ್ಷಗಳಿಂದ ಯಕ್ಷಗಾನವನ್ನು ಒಂದು ಪಠ್ಯವಾಗಿ ಕಲಿಸಲಾಗುತ್ತದೆ.

ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದ್ದು, ದೇಶದ ನಾನಾ ಭಾಗಗಳ ಕಲಾವಿದರು ಅಪರೂಪದ ಕರಾವಳಿಯ ಕಲೆಯನ್ನು ಅಭ್ಯಸಿಸುವಂತಾಗಿದೆ. ಅದಮಾರು ಮಠದ ಆಶ್ರಯದಲ್ಲಿ ಈ ಶಿಬಿರ ಏರ್ಪಟ್ಟಿದ್ದು, ಗಾನನಾಟ್ಯ ಸಂಭಾಷಣೆಯ ಅಪರೂಪದ ಕಲೆ ದೇಶದ ಮೂಲೆ ಮೂಲೆಗಳಿಂದ ಕಲಾವಿದರನ್ನು ಆಕರ್ಷಿಸುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago