Featured

ಯಕ್ಷಗಾನ ಕಾಲಮಿತಿ ರಾತ್ರಿ 12 ಗಂಟೆವರೆಗೆ ವಿಸ್ತರಣೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್ – Vishwanews24

ಯಕ್ಷಗಾನ ಕಾಲಮಿತಿ ರಾತ್ರಿ 12 ಗಂಟೆವರೆಗೆ ವಿಸ್ತರಣೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಕಾಲಮಿತಿಯನ್ನು ರಾತ್ರಿ 10 ಗಂಟೆಯಿಂದ 12 ಗಂಟೆವರೆಗೆ ವಿಸ್ತರಿಸಿ ವಿಶೇಷ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಯಕ್ಷಗಾನ ಕಾಲಮಿತಿಗೆ ಸಂಬಂಧಿಸಿ ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿ ರಾತ್ರಿ 10 ಗಂಟೆಯ ಬಳಿಕ ಕರ್ಕಶ ಶಬ್ದಕ್ಕೆ ಅವಕಾಶ ಇಲ್ಲ ಎಂದು ಹೇಳಿದೆ. ಈ ಆದೇಶ ಪಾಲಿಸುವಂತೆ ರಾಜ್ಯ ಸರಕಾರವೂ ಸೂಚನೆ ನೀಡಿದೆ. ಆದರೆ ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ನಡೆಯುವ ಪುರಾತನ, ಸಾಂಪ್ರದಾಯಿಕ ಕಲೆಯಾದ ಯಕ್ಷಗಾನ ಬೆಳಗ್ಗಿನವರೆಗೆ ನಡೆಸಲು ಅನುಮತಿ ಕೋರಲಾಗಿದೆ. ಈ ಬಗ್ಗೆ ಸಭೆ ನಡೆಸಿ ಯಕ್ಷಗಾನ ಕಾಲಮಿತಿಯನ್ನು ರಾತ್ರಿ 12 ಗಂಟೆಯವರೆಗೆ ವಿಸ್ತರಿಸಿ ವಿಶೇಷ ಅನುಮತಿ ನೀಡಲಾಗಿದೆ ಎಂದು ಹೇಳಿದರು.

ಹಾಗೂ ಇದೇ ವೇಳೆ ಅವರು, ದೈವ ಕಲೆಗೆ ಸಂಬಂಧಿಸಿ ಅಂತಹ ಯಾವುದೇ ಅರ್ಜಿ ಬಂದಿಲ್ಲ. ಬಂದಾಗ ಆ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

13 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

14 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

14 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

14 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

14 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

14 hours ago