ಚಿಕ್ಕಬಳ್ಳಾಪುರ: ರಾಜ್ಯದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ಬಳಿಕವೇ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ. ನೆರೆ ಪರಿಹಾರ ತರುವಲ್ಲಿ ವಿಫಲವಾಗಿದೆಯೆಂಬ ದಿನೇಶ್ ಗುಂಡೂರಾವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆಯೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಗತಿ ಬಂದಿದೆ ಎಂದರು.
ಯಾವುದೇ ಸರ್ಕಾರವನ್ನು ಎರಡು ತಿಂಗಳಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ, ಐದು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 127 ಇದ್ದ ಶಾಸಕರ ಸಂಖ್ಯೆ ಈಗ 78 ಕ್ಕೆ ಬಂದಿದೆ. ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನಕ್ಕೆ ಬಂದಿದೆ ಎಂದರು.
ದಿನೇಶ್ ಗುಂಡೂರಾವ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಅಧ್ಯಕ್ಷರಾಗಿ ಹೇಗೆ ಇರಬೇಕು. ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ತಿಳದುಕೊಳ್ಳಿ. ಅವರಿಂದಲೇ ಪಕ್ಷ ರಾಜ್ಯದಲ್ಲಿ ಆಧೋಗತಿಗೆ ಇಳಿಯಿತು. ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ನೇತ್ರತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…