Featured

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ದಲಿತರಿಗೆ ಪೊಳ್ಳು ಭರವಸೆ ಕೊಡಲಿಲ್ಲ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ – vishwanews24

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ದಲಿತರಿಗೆ ಪೊಳ್ಳು ಭರವಸೆ ಕೊಡಲಿಲ್ಲ; ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ ಅವರು, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದವರು; ಅವರು ಈ ಕರಾಳದಿನಕ್ಕೆ ಕಾರಣರು ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ…ಸಿದ್ದರಾಮಯ್ಯನವರು ಅನುಭವಿ ಮುಖ್ಯಮಂತ್ರಿ; ಅವರು ಅಸಮರ್ಥ ಎನ್ನುವುದಿಲ್ಲ. ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ ದಲಿತರ ಮೇಲಿನ ಕಾಳಜಿ ಮರೆತುಹೋಗಿದೆಯೇ ಎಂದು ಬಿ.ವೈ. ವಿಜಯೇಂದ್ರ ಅವರು ಕೇಳಿದರು.
ದಲಿತ ಸಮುದಾಯಕ್ಕೆ ಶಕ್ತಿ ಕೊಡಬೇಕಾದ ಹಣದ ದುರ್ಬಳಕೆ ಮಾಡಿದ್ದೀರಲ್ಲ? ಇದು ನ್ಯಾಯವೇ ಸಿದ್ದರಾಮಯ್ಯನವರೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಸಿದ್ದರಾಮಯ್ಯನವರೇ, ಹಿಂದೆ ಬಿಜೆಪಿ ಸರಕಾರ ಇದ್ದಾಗ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ನಿಮ್ಮಂತೆ ಪೊಳ್ಳು ಭರವಸೆ ಕೊಡಲಿಲ್ಲ; ನಮ್ಮ ಸರಕಾರಗಳು ದಲಿತರ ಕಾಲೊನಿಗಳಿಗೆ ಮೂಲಸೌಕರ್ಯಗಳನ್ನು ಕೊಟ್ಟು ಕಾಂಕ್ರೀಟ್ ರಸ್ತೆಗಳನ್ನು ಮಾಡಿದ್ದವು. ಸಿದ್ದರಾಮಯ್ಯನವರೇ ನಿಮ್ಮ ದಲಿತ ಕಾಳಜಿ ಎಲ್ಲಿ ಹೋಗಿದೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರೇ, ಯಾವುದೇ ಕಾರಣಕ್ಕೂ ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕದಿರಿ ಎಂದು ಮನವಿ ಮಾಡಿದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

2 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

3 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

4 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

6 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

6 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

6 hours ago