ದಾವಣಗೆರೆ: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನಡೆದಷ್ಟು ಪಿತೂರಿ, ಷಡ್ಯಂತ್ರ ಬೇರೆ ಯಾವ ರಾಜಕಾರಣಿಯ ವಿರುದ್ಧವೂ ನಡೆದಿಲ್ಲ ಎಂದು ಬಿಜೆಪಿ ಯುವ ಘಟಕದ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿರುವ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ಮಾತ್ರ ಯಾರಿಗೂ ಕೇಡು ಬಯಸದೇ ರಾಜಕಾರಣ ಮಾಡುತ್ತಾ ಬಂದರು. ಹಾಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಲು ಜನ ಬಯಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 48 ಗಂಟೆಗಳಲ್ಲಿಯೇ ಮಳೆ ಬಂತು. ಆದರೆ ಮಳೆ ಜಾಸ್ತಿಯಾಗಿದ್ದರಿಂದ ಪ್ರವಾಹ ಉಂಟಾಯಿತು. ಒಂದು ತಿಂಗಳ ಕಾಲ ಯಾವುದೇ ಸಚಿವರಿಲ್ಲದಿದ್ದರೂ ಅವರೊಬ್ಬರೇ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿ ಸಂತ್ರಸ್ತರ ನೆರವಿಗೆ ಧಾವಿಸಿದರು ಎಂದರು.
‘ಅವಕಾಶ ಸಿಕ್ಕಿದ್ದರೆ ವರಣಾ ಕ್ಷೇತ್ರದಿಂದ ಗೆದ್ದು ಶಾಸಕನಾಗುತ್ತಿದ್ದೆ. ಆದರೆ ಯಡಿಯೂರಪ್ಪರಂತೆ ಹೋರಾಟ ಮಾಡಿ ಬೆಳವಣಿಗೆ ಹೊಂದಬೇಕು ಎಂಬುದು ರಂಭಾಪುರಿ ಸ್ವಾಮೀಜಿ ಅವರ ಆಶೀರ್ವಾದವಾಗಿತ್ತು. ಹಾಗಾಗಿ ಹೋರಾಟದ ಮೂಲಕವೇ ರಾಜಕೀಯವಾಗಿ ಬೆಳೆಯುವೆ’ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…