Featured

ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ : ವೀರಶೈವ–ಲಿಂಗಾಯತ ಮಠಾಧೀಶರ ಎಚ್ಚರಿಕೆ -Vishwanews24

ಕಲಬುರ್ಗಿ: ‘ಬಸವ ತತ್ವದಂತೆ ನಡೆಯುತ್ತಿರುವ, ಕೊಡುಗೈ ದಾನಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಕಲ್ಯಾಣ ಕರ್ನಾಟಕ ಭಾಗದ ವೀರಶೈವ–ಲಿಂಗಾಯತ ಮಠಾಧೀಶರು ಎಚ್ಚರಿಕೆ ನೀಡಿದರು.

ಈ ಭಾಗಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿದ್ದಕ್ಕಾಗಿ ಯಡಿಯೂರಪ್ಪ ಅವರಿಗೆ ಮಂಗಳವಾರ ‘ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆ’ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಹಲವು ಮಠಾಧೀಶರು ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪ್ರಾಸ್ತಾವಿಕ ಭಾಷಣದಲ್ಲಿ ದೇವಾಪುರದ ಶಿವಮೂರ್ತಿ ಶಿವಾಚಾರ್ಯರು, ‘ಈ ಭಾಗದ ಮಠಗಳು ಶಿಕ್ಷಣ ಸಂಸ್ಥೆಗಳ ಮೂಲಕ ಅಕ್ಷರ ದಾಸೋಹ ನೀಡುತ್ತಿವೆ. ಸಂಕಷ್ಟದಲ್ಲಿದ್ದ ಮಠಗಳಿಗೆ ಯಡಿಯೂರಪ್ಪ ಅವರು ಆರ್ಥಿಕ ನೆರವು ನೀಡಿದ್ದಾರೆ’ ಎಂದು ಸ್ಮರಿಸಿದರು.

ಯಡಿಯೂರಪ್ಪ ಅವರನ್ನು ಆಧುನಿಕ ಬಸವಣ್ಣ ಎಂಬ ಕೆಲ ಮಠಾಧೀಶರ ಹೊಗಳಿಕೆಯನ್ನು ನಯವಾಗಿಯೇ ಆಕ್ಷೇಪಿಸಿದ ನಾಲವಾರ ಮಠದ ಸಿದ್ಧತೋಟೇಂದ್ರ ಶಿವಾಚಾರ್ಯರು, ‘ಸ್ವಾಮೀಜಿಗಳು ಸೇರಿದಂತೆ ಯಾರೂ ಬಸವಣ್ಣನವರ ವ್ಯಕ್ತಿತ್ವದ ಸಮೀಪ‍ಕ್ಕೂ ಸುಳಿಯಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರನ್ನು ಬಸವತತ್ವವನ್ನು ಎದೆಯಲ್ಲಿಟ್ಟುಕೊಂಡು ಆಚರಿಸುತ್ತಿರುವ ಬಸವ ಅನುಯಾಯಿ ಎನ್ನಬಹುದು’ ಎಂದರು.

ಸುಲಫಲ ಮಠಕ್ಕೆ ತೆರಳಿದ ಯಡಿಯೂರಪ್ಪ ಅವರು, ಅಲ್ಲಿ ಬಸವ ಭವನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ  ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ‘ಈ ಸರ್ಕಾರದ ಅವಧಿ ಮುಗಿಯುವವರೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕು. ಪದಚ್ಯುತಿಗೊಳಿಸಿ ದರೆ ಎಲ್ಲ ಮಠಾಧೀಶರು ದೆಹಲಿಯಲ್ಲಿ ಧರಣಿ ನಡೆಸುತ್ತೇವೆ’ ಎಂದು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜಯಸಿದ್ಧೇಶ್ವರ ಸ್ವಾಮೀಜಿ, ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಡಾ.ಶರಣಬಸವಪ್ಪ ಅಪ್ಪ, ಶಾಖಾಪುರ ಮಠದ ಸಿದ್ದರಾಮ ಶಿವಾಚಾರ್ಯರು, ಮಾದನ ಹಿಪ್ಪರಗಾದ ಶಿವಲಿಂಗ ಸ್ವಾಮೀಜಿ, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು, ಕಡಕೋಳದ ಡಾ.ರುದ್ರಮುನಿ ಶಿವಾಚಾರ್ಯರು, ಪಾಳಾದ ಡಾ.ಗುರುಮೂರ್ತಿ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಕಡಗಂಚಿಯ ಶಾಂತಲಿಂಗ ಶಿವಾಚಾರ್ಯರು, ಮಹಾಗಾಂವ ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಇದ್ದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago