ಆಪರೇಷನ್ ಕಮಲದ ಮೂಲಕ ಅನೈತಿಕವಾಗಿ ಬಂದಿರುವ ಕೂಸು ಈ ಸರ್ಕಾರ. ಕಾಂಗ್ರೆಸ್,ಜೆಡಿಎಸ್ ನಿಂದ 17 ಶಾಸಕರನ್ನು ಆಪರೇಷನ್ ಮಾಡಿದ್ದೀರೆ. ಇಲ್ಲವಾಗಿದ್ರೆ ಯಡಿಯೂರಪ್ಪ ಅಲ್ಪಾವಧಿ ಸಿಎಂ ಆಗಿ ದಾಖಲೆ ಮಾಡುತ್ತಿದ್ದರು. ಯಡಿಯೂರಪ್ಪ ಇಂದು ಸಿಎಂ ಆಗೋಕೆ ಜನಾದೇಶ ಕಾರಣವಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ದಿನದಲ್ಲೇ ರಾಜ್ಯಪಾಲರ ಭಾಷಣದ ಚರ್ಚೆ ಮುಗಿಸೋಕೆ ಆಗಲ್ಲ. ಅದಕ್ಕೆ ಉತ್ತರ ಪಡೆದುಕೊಳ್ಳೋಕೆ ಸಾಧ್ಯವಿಲ್ಲ. ಇದು ಸದಸ್ಯರ ಹಕ್ಕು ಮೊಟಕು ಮಾಡಿದಂತೆ. ರಾಜ್ಯಪಾಲರ ಭಾಷಣದ ಚರ್ಚೆಗೆ ಕನಿಷ್ಟ 10 ದಿನ ನಿಗದಿ ಮಾಡಬೇಕು. ಇಲ್ಲವಾದರೆ ಇದೊಂದು ಅಣಕವಾಗುತ್ತದೆ. ರಾಜ್ಯಪಾಲರು ಭಾಷಣ ಮಾಡೋದು,ಉತ್ತರ ಕೊಡುವುದು. ಕೊನೆಗೆ ನಾವು ಸಭಾತ್ಯಾಗ ಮಾಡೋದು ಅಷ್ಟೇ ಆಗುತ್ತದೆ. ಬಜೆಟ್ ಅಧಿವೇಶನದಲ್ಲೂ ಚರ್ಚೆ ಮಾಡಿ, ಉತ್ತರ ಕೊಡಬಹುದು ಎಂಬುದಾಗಿ ಹೇಳಿದರು.
ಇನ್ನೂ ಮುಂದುವರೆದು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಗೆಯನ್ನು ವಿವರಿಸಿದ ಅವರು, ಈ ಸರ್ಕಾರ 17 ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ಬಂದಿದ್ದು. ಬಿಜೆಪಿಯವರು ಜನಾದೇಶದಿಂದ ಬಂದಿದ್ದೇವೆ ಎನ್ನಬಾರದು. ಆಪರೇಷನ್ ಕಮಲದಿಂದ ಬಂದಿದ್ದೇವೆ ಎನ್ನಬೇಕು ಎಂಬುದಾಗಿ ಸರ್ಕಾರವನ್ನ ಲೇವಡಿ ಮಾಡಿದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…