ಬೆಂಗಳೂರು,: ಯಡಿಯೂರಪ್ಪ ಉತ್ತಮ ಆಡಳಿತ ನೀಡುವುದಾಗಿ ಹೇಳಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಅದನ್ನೂ ಸ್ವಾಗತಿಸುತ್ತೇನೆ. ಜನಸೇವೆ ಮಾಡಲು ಪ್ರಾಮಾಣಿಕವಾಗಿರಬೇಕು. ನನ್ನ ಅವಧಿಯಲ್ಲಿ ನಾನು ಆ ಪ್ರಯತ್ನ ಮಾಡಿದ್ದೇನೆ. ಕುಮಾರ ಸ್ವಾಮಿಯವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿತ್ತು ಎಂಬ ಆರೋಪಗಳು ಸುಳ್ಳು. ಮೈತ್ರಿ ಸರಕಾರ ಉತ್ತಮವಾಗಿತ್ತು. ಕೆಲಸ ಮಾಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಅವರು ಒಮ್ಮೆಯೂ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಪ್ರತಿಬಾರಿಯೂ ಬಹುಮತದ ಕೊರತೆಯೊಂದಿಗೆ ಸರಕಾರ ರಚಿಸಿದ್ದಾರೆ. ನೀವು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಇರಬೇಕೆನ್ನುವುದು ನನ್ನ ಆಶಯ. ಅತೃಪ್ತರನ್ನು ಕಟ್ಟಿಕೊಂಡು ಸ್ಥಿರ ಸರಕಾರ ನೀಡಲು ಸಾಧ್ಯವೇ? ನೀವು ಬಹುದಿನ ಮುಖ್ಯಮಂತ್ರಿಯಾಗಿ ಇರುತ್ತೀರೆಂಬ ಖಾತ್ರಿ ನನಗಿಲ್ಲ. ಬಿಜೆಪಿಗೆ ಬಹುಮತವೇ ಇಲ್ಲ. ಅತೃಪ್ತರ ಮೂಲಕ ಸರಕಾರ ರಚನೆ ಮಾಡಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಧಿಕಾರಕ್ಕೇರಿರುವ ಬಿಜೆಪಿಯ ವಿಶ್ವಾಸ ಮತಕ್ಕೆ ನಾವು ಬೆಂಬಲ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…