ಯಡಿಯೂರಪ್ಪ ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ : ಕುಮಾರಸ್ವಾಮಿ ಅಸಮಾಧಾನ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಫಿಲಂಸಿಟಿಯನ್ನು ರಾಮನಗರದಿಂದ ರೋರಿಚ್ ಎಸ್ಟೇಟ್‍ಗೆ ಸ್ಥಳಾಂತರಿಸಲು ಮುಂದಾಗಿದೆ. ಇದೀಗ ಫಿಲಂ ಸಿಟಿಯನ್ನು ರಾಮನಗರದಿಂದ ಸ್ಥಳಾಂತರಿಸಿ ಜೀವವೈವಿಧ್ಯತೆಯ ತಾಣ ಬನ್ನೇರುಘಟ್ಟ ಸಮೀಪದ ದೇವಿಕಾರಾಣಿ-ರೋರಿಚ್ ಎಸ್ಟೇಟ್’ನಲ್ಲಿ ನಿರ್ಮಿಸುವ ಯೋಜನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರ ಯಡಿಯೂರಪ್ಪರ ದ್ವೇಷ-ನಾಶದ ರಾಜಕಾರಣದ ಪ್ರತೀಕವಾಗಿದೆ ಎಂದು ದೂರಿದ್ದಾರೆ.

ರಾಮನಗರದಲ್ಲಿ ಚಿತ್ರನಗರಿ ನಿರ್ಮಿಸಬೇಕೆಂದು ತಮ್ಮ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು. ಈ ಮೂಲಕ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಉದ್ದೇಶವಾಗಿತ್ತು. ಆದರೆ ರಾಮನಗರದಿಂದ ರೋರಿಚ್’ಗೆ ಚಿತ್ರನಗರಿಯನ್ನು ಸ್ಥಳಾಂತರಿಸುವ ನಿರ್ಧಾರದ ಮೂಲಕ ಯಡಿಯೂರಪ್ಪ ರಾಮನಗರ ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.