ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಫಿಲಂಸಿಟಿಯನ್ನು ರಾಮನಗರದಿಂದ ರೋರಿಚ್ ಎಸ್ಟೇಟ್‍ಗೆ ಸ್ಥಳಾಂತರಿಸಲು ಮುಂದಾಗಿದೆ. ಇದೀಗ ಫಿಲಂ ಸಿಟಿಯನ್ನು ರಾಮನಗರದಿಂದ ಸ್ಥಳಾಂತರಿಸಿ ಜೀವವೈವಿಧ್ಯತೆಯ ತಾಣ ಬನ್ನೇರುಘಟ್ಟ ಸಮೀಪದ ದೇವಿಕಾರಾಣಿ-ರೋರಿಚ್ ಎಸ್ಟೇಟ್’ನಲ್ಲಿ ನಿರ್ಮಿಸುವ ಯೋಜನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರ ಯಡಿಯೂರಪ್ಪರ ದ್ವೇಷ-ನಾಶದ ರಾಜಕಾರಣದ ಪ್ರತೀಕವಾಗಿದೆ ಎಂದು ದೂರಿದ್ದಾರೆ.
ರಾಮನಗರದಲ್ಲಿ ಚಿತ್ರನಗರಿ ನಿರ್ಮಿಸಬೇಕೆಂದು ತಮ್ಮ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು. ಈ ಮೂಲಕ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಉದ್ದೇಶವಾಗಿತ್ತು. ಆದರೆ ರಾಮನಗರದಿಂದ ರೋರಿಚ್’ಗೆ ಚಿತ್ರನಗರಿಯನ್ನು ಸ್ಥಳಾಂತರಿಸುವ ನಿರ್ಧಾರದ ಮೂಲಕ ಯಡಿಯೂರಪ್ಪ ರಾಮನಗರ ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…