ಯಡಿಯೂರಪ್ಪ ಪೋಕ್ಸೋ ಪ್ರಕರಣ : ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ – vishwanews24

Featured, ರಾಜ್ಯ ನ್ಯೂಸ್

ಯಡಿಯೂರಪ್ಪ ಪೋಕ್ಸೋ ಪ್ರಕರಣ : ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ.

ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ.

ಆಟೋ ರಿಕ್ಷಾಕ್ಕೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ; ಆಟೋ ಚಾಲಕ ಗಂಭೀರ – vishwanews24

ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು.

ಮಂಗಳೂರು: ಮಾ.18ರಂದು ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆ ತಾತ್ಕಾಲಿಕವಾಗಿ ಕೈಬಿಟ್ಟ ಸಮಿತಿ – vishwanews24

Leave a Reply