ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ.
ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್ ಯಡಿಯೂಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.
ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್ನಲ್ಲಿದ್ದ ಸಂಭಾಷಣೆ ಬಿಎಸ್ ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.
1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…