ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.
ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.
ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಸಿಐಡಿ ಒಂದಷ್ಟು ಸಾಕ್ಷ್ಯ ಕಲೆ ಹಾಕಿದೆ. ದೂರುದಾರೆ ನೀಡಿದ್ದ ವಿಡಿಯೋ ಪಡೆದು ಪರಿಶೀಲನೆ ಜೊತೆಗೆ ಬಾಲಕಿ, ಬಿಎಸ್‍ವೈ ಧ್ವನಿ ಸಂಗ್ರಹ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದೆ.
ಈ ಎಲ್ಲಾ ಬೆಳವಣಿಗೆಯ ನಡುವೆ ತಮ್ಮ ಮೇಲಿನ ಆರೋಪ ನಿರಾಧಾರವಾದದ್ದು, ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ರದ್ದುಗೊಳಿಸಬೇಕು ಎಂದು ಬಿಎಸ್‍ವೈ ನ್ಯಾಯಾಲಯದ ಮೊರೆ ಹೋಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…