ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಬೇಳೂರು ಗೋಪಾಲಕೃಷ್ಣ -Vishwanews24
ಶಿವಮೊಗ್ಗ : ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ನಾನು ನಮ್ಮ ಮನೆದೇವರಿಗೆ ಹರಕೆ ಹೊತ್ತಿದ್ದೇನೆ. ಯಾವುದೇ ಕಾರಣಕ್ಕೂ ಅವರು ಮತ್ತೆ ಸಿಎಂ ಆಗುವುದಿಲ್ಲ. ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಪ್ರತಿಜ್ಞೆ ಮಾಡಿದ್ದಾರೆ.
ಬಿಜೆಪಿ ನಾಯಕರು ರಾಜಕೀಯವನ್ನು ಅಸ್ಥಿರ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮನಸು ಮಾಡಿದರೆ ಆಪರೇಷನ್ ಹಸ್ತ ಮಾಡಬಹುದು. ಹಲವು ಬಿಜೆಪಿ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ. ಆದರೆ, ಅವರು ಆ ಮಟ್ಟಕ್ಕೆ ಇಳಿಯುತ್ತಿಲ್ಲ ಎಂದು ಗೋಪಾಲಕೃಷ್ಣ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಯಾವುದೇ ಕಾರಣಕ್ಕೂ ಶರಾವತಿಯನ್ನು ಬೆಂಗಳೂರಿಗೆ ಕೊಂಡೊಯ್ಯಬಾರದು. ನಾನು ಕೂಡ ಹೋರಾಟಗಾರರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. . ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳಬಾರದು ಎಂದಿದ್ದಾರೆ.
ಕೇವಲ ಮೋದಿ ಹೆಸರು ಹೇಳಿಕೊಂಡು ಎಲ್ಲರೂ ಪ್ರಚಾರ ಮಾಡಿದ್ದಾರೆ. ಜನರೂ ಮೋದಿ ಮುಖ ನೋಡಿಕೊಂಡು ಮತ ಹಾಕಿದ್ದಾರೆ ಎಂಬುದನ್ನು ಇಲ್ಲಿನ ನಾಯಕರು ಮರೆಯಬಾರದು. ಈ ಹಿಂದೆ ಶೋಭಾ ಮೇಡಂ ಗೋಹತ್ಯೆ ಬಗ್ಗೆ ಮಾತನಾಡಿದ್ದರು. ಈಗ ಅವರದೇ ಸರ್ಕಾರ ಕೇಂದ್ರದಲ್ಲಿದೆ. ರಾಷ್ಟ್ರಪತಿಗಳಿಂದ ಅಂಕಿತ ಹಾಕಿಸಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧವೂ ಬೇಳೂರು ಗೋಪಾಲಕೃಷ್ಣ ಹರಿಹಾಯ್ದಿದ್ದಾರೆ.

