Featured

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಬೇಳೂರು ಗೋಪಾಲಕೃಷ್ಣ -Vishwanews24

ಶಿವಮೊಗ್ಗ : ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ನಾನು ನಮ್ಮ ಮನೆದೇವರಿಗೆ ಹರಕೆ ಹೊತ್ತಿದ್ದೇನೆ. ಯಾವುದೇ ಕಾರಣಕ್ಕೂ ಅವರು ಮತ್ತೆ ಸಿಎಂ ಆಗುವುದಿಲ್ಲ. ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

ಬಿಜೆಪಿ ನಾಯಕರು ರಾಜಕೀಯವನ್ನು ಅಸ್ಥಿರ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಮನಸು ಮಾಡಿದರೆ ಆಪರೇಷನ್ ಹಸ್ತ ಮಾಡಬಹುದು. ಹಲವು ಬಿಜೆಪಿ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ. ಆದರೆ, ಅವರು ಆ  ಮಟ್ಟಕ್ಕೆ ಇಳಿಯುತ್ತಿಲ್ಲ ಎಂದು ಗೋಪಾಲಕೃಷ್ಣ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಯಾವುದೇ ಕಾರಣಕ್ಕೂ ಶರಾವತಿಯನ್ನು ಬೆಂಗಳೂರಿಗೆ ಕೊಂಡೊಯ್ಯಬಾರದು. ನಾನು ಕೂಡ ಹೋರಾಟಗಾರರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.  . ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳಬಾರದು ಎಂದಿದ್ದಾರೆ.

ಕೇವಲ ಮೋದಿ ಹೆಸರು ಹೇಳಿಕೊಂಡು ಎಲ್ಲರೂ ಪ್ರಚಾರ ಮಾಡಿದ್ದಾರೆ. ಜನರೂ ಮೋದಿ ಮುಖ ನೋಡಿಕೊಂಡು ಮತ ಹಾಕಿದ್ದಾರೆ ಎಂಬುದನ್ನು ಇಲ್ಲಿನ ನಾಯಕರು ಮರೆಯಬಾರದು. ಈ ಹಿಂದೆ ಶೋಭಾ ಮೇಡಂ ಗೋಹತ್ಯೆ ಬಗ್ಗೆ ಮಾತನಾಡಿದ್ದರು. ಈಗ ಅವರದೇ ಸರ್ಕಾರ  ಕೇಂದ್ರದಲ್ಲಿದೆ. ರಾಷ್ಟ್ರಪತಿಗಳಿಂದ ಅಂಕಿತ ಹಾಕಿಸಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧವೂ ಬೇಳೂರು ಗೋಪಾಲಕೃಷ್ಣ ಹರಿಹಾಯ್ದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago