ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿದೆ : ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ

Featured, ರಾಜ್ಯ ನ್ಯೂಸ್

ಮೈಸೂರುಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜೈ ಎಂದು ಶಾಲು  ಹೊದಿಸಿ, ಹೂವಿನ ಹಾರ ಹಾಕಿ, ಸನ್ಮಾನಿಸುತ್ತಾ ಚಾಮುಂಡಿ ತಾಯಿಯ ದೇವರ ದರ್ಶನಕ್ಕೆ ಬರಮಾಡಿಕೊಂಡ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ.

ಬಳಿಕ ಸಿಎಂ ಯಡಿಯೂರಪ್ಪ ಅವರೊಂದಿಗೆ ಚಾಮುಂಡೇಶ್ವರಿ ದೇವಸ್ಥಾನದಕ್ಕೆ ತೆರಳಿದರು. ಸಿಎಂ ಜೊತೆಗೆ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಆ ನಂತ್ರ, ಸಿಎಂ ಅವರನ್ನು ಬೀಳ್ಕೊಟ್ಟ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿದೆ. ಬರ ಎಲ್ಲ ಹೋಗಿ, ನದಿ, ಕೆರೆ ಕಟ್ಟೆಗಳೆಲ್ಲಾ ತುಂಬಿ ಹೋಗಿವೆ ಎಂದರು.

ಇನ್ನೂ ಮುಂದುವರೆದು, ಯಡಿಯೂರಪ್ಪ ಈಗಲೂ ಪ್ರವಾಹ ಸಂತ್ರಸ್ತರಿಗಾಗಿ ಸ್ಪಂದಿಸುತ್ತಿದ್ದಾರೆ. ನೆರೆ, ಪ್ರವಾಹ ಸಂತ್ರಸ್ತರಿಗೆ ಸರಿಯಾದ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳುವ ಮೂಲಕ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪರವಾಗಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು.