ಮೈಸೂರು : ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜೈ ಎಂದು ಶಾಲು ಹೊದಿಸಿ, ಹೂವಿನ ಹಾರ ಹಾಕಿ, ಸನ್ಮಾನಿಸುತ್ತಾ ಚಾಮುಂಡಿ ತಾಯಿಯ ದೇವರ ದರ್ಶನಕ್ಕೆ ಬರಮಾಡಿಕೊಂಡ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ.
ಬಳಿಕ ಸಿಎಂ ಯಡಿಯೂರಪ್ಪ ಅವರೊಂದಿಗೆ ಚಾಮುಂಡೇಶ್ವರಿ ದೇವಸ್ಥಾನದಕ್ಕೆ ತೆರಳಿದರು. ಸಿಎಂ ಜೊತೆಗೆ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಆ ನಂತ್ರ, ಸಿಎಂ ಅವರನ್ನು ಬೀಳ್ಕೊಟ್ಟ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿದೆ. ಬರ ಎಲ್ಲ ಹೋಗಿ, ನದಿ, ಕೆರೆ ಕಟ್ಟೆಗಳೆಲ್ಲಾ ತುಂಬಿ ಹೋಗಿವೆ ಎಂದರು.
ಇನ್ನೂ ಮುಂದುವರೆದು, ಯಡಿಯೂರಪ್ಪ ಈಗಲೂ ಪ್ರವಾಹ ಸಂತ್ರಸ್ತರಿಗಾಗಿ ಸ್ಪಂದಿಸುತ್ತಿದ್ದಾರೆ. ನೆರೆ, ಪ್ರವಾಹ ಸಂತ್ರಸ್ತರಿಗೆ ಸರಿಯಾದ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳುವ ಮೂಲಕ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪರವಾಗಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…