ಬೆಂಗಳೂರು:.ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಎಲ್ಲವೂ ಕಾಂಗ್ರೆಸ್ ಪಕ್ಷದ ಮುಖಂಡರ ಕೈಯಲ್ಲೇ ಇದೆ. ರಾಜಕಾರಣದಲ್ಲಿ ಏಳು ಬೀಳು ಇದ್ದೇ ಇರುತ್ತದೆ. ನನ್ನ ಜೊತೆಗೆ ಇದ್ದು ನನ್ನ ಜೊತೆಗೆ ಬೆಳೆದವರು ಬಿಟ್ಟು ಹೋದರು. ಆದರೂ ಸಹ ನಾನು ದೃತಿಗೆಡದೆ ಮುಂದೆ ಬಂದಿದ್ದೇನೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಪರೋಕ್ಷವಾಗಿ ಮಾಜಿ ಸಿಎಂ ಸಿದ್ಧರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ.
ಮೈತ್ರಿ ಸರ್ಕಾರ ಮಾಡಲೇಬೇಕು ಎಂದು ನನಗೆ ಇರಲಿಲ್ಲ. ದೆಹಲಿ ನಾಯಕರು ನಿಮ್ಮ ಮಗನನ್ನು ಸಿಎಂ ಮಾಡಬೇಕೆಂದು ಬಂದಿದ್ದರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಲೋಕಸಭೆ ಚುನಾವಣೆ ನಂತರ ಶಕ್ತಿಯನ್ನು ಕಳೆದುಕೊಂಡಿದೆ.
ನಮ್ಮ ಪಕ್ಷದ ಪಾಲಿನ ಮಂತ್ರಿ ಸ್ಥಾನವನ್ನು ಅವರು ತೆಗೆದುಕೊಂಡಿದ್ದಾರೆ. ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ. ಏನಾದರೂ ಮಾತನಾಡಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂದು ಕಾಂಗ್ರೆಸ್ ನವರು ಓಡಿಬಂದರು. ಎಲ್ಲವನ್ನು ಚರ್ಚೆ ಮಾಡದೆ ಸರ್ಕಾರ ರಚನೆಗೆ ಮುಂದಾದರು. ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಈಗ ಒನ್ ಥರ್ಡ್ ನಿಯಮವೂ ಇಲ್ಲ ಏನನ್ನು ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ. ಈ ಮೂಲಕ ದೋಸ್ತಿ ಕಾಂಗ್ರೆಸ್ ಗೆ ದೊಡ್ಡ ಗೌಡರು ಬಿಗ್ ಶಾಕ್ ನೀಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…