ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ, ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ : ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

ಸಿದ್ದಾಮಯ್ಯ ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ..

ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ : ಈಶ್ವರಪ್ಪ -Vishwanews24

ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ..

ಶಿವಮೊಗ್ಗ Vishwanews24: ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯನವರು ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ. ಈ ಬಳಿಕ ನಾನೇ ಸಿಎಂ ಆಗಬಹುದು ಅಂತ ಅಂದುಕೊಂಡಿದ್ದಾರೆ. ಆದರೆ ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ” ಎಂದು ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಲ್ಲಿ ಆಡಳಿತಾತ್ಮಕವಾಗಿ ಇರೋ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ವಿಪಕ್ಷದವರಿಗೆ ಬಿಜೆಪಿಯ ಬಗ್ಗೆ ಮಾತನಾಡಬೇಡಿ, ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ” ಎಂದರು.

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಇನ್ನು ಇಲಾಖೆಯಲ್ಲಿನ ಹಣ ವರ್ಗಾವಣೆ ವಿಚಾರವಾಗಿ ಸಿಎಂ ಗಮನಕ್ಕೆ ತಂದ ನಂತರವೇ ರಾಜ್ಯಪಾಲರಿಗೂ, ರಾಜ್ಯ ಉಸ್ತುವಾರಿಗಳಿಗೂ ಪತ್ರದಲ್ಲಿ ತಿಳಿಸಿದ್ದು, ಆ ಬಗ್ಗೆ ಆದಷ್ಟು ಬೇಗ ಪರಿಹರಿಸುವುದಾಗಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದಿದ್ದಾರೆ.

“ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಕನಸು ಕಾಣುತ್ತಾ ಇರೋದು ಹಗಲು ಕನಸು. ಅದು ನನಸಾಗೋದಿಲ್ಲ” ಎಂದು ಹೇಳಿದ್ದಾರೆ.