ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಮಾತಾಡುತ್ತಾರೆ ಎಂದರು.
ನಂತರ ಮಾತನಾಡಿದ ಪರಮೇಶ್ವರ್, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.
ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ ಎಂದ ಪರಮೇಶ್ವರ್, ಅವರು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದರು.
ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…