Featured

ಯಡಿಯೂರಪ್ಪ ಶ್ರೇಷ್ಠ ನಾಯಕ. ನನ್ನ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ :ನಳಿನ್‌ ಕುಮಾರ್‌ ಕಟೀಲ್ -Vishwanews24

ಚಿಕ್ಕೋಡಿ: ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ನನ್ನ ಹಾಗೂ ಅವರ ಮಧ್ಯೆ ಯಾವುದೇ ಭಿನ್ನಮತ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದರು.

‘ರಾಜ್ಯ ಬಿಜೆಪಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಸುಪ್ರೀಂ. ನಿತ್ಯವೂ ಎರಡು ಬಾರಿ ಅವರೊಂದಿಗೆ ನಾನು ಮಾತುಕತೆ ನಡೆಸುತ್ತೇನೆ. ಪದಾಧಿಕಾರಿಗಳ ನೇಮಕ ಸೇರಿ ಪ್ರತಿ ವಿಷಯದಲ್ಲೂ ಅವರ ಮಾರ್ಗದರ್ಶನ ಪಡೆಯುತ್ತೇನೆ. ಎಂದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಂಧಿ ಸಂಕಲ್ಪಯಾತ್ರೆಗೆ ತಾಲ್ಲೂಕಿನ ಯೆಕ್ಸಂಬಾ ಗ್ರಾಮದ ಬೀರೇಶ್ವರ ಮಂದಿರದ ಬಳಿ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಬಿಜೆಪಿ ಅಧ್ಯಕ್ಷರಾದ ನಂತರತಮ್ಮ ಮತ್ತು ಯಡಿಯೂರಪ್ಪ ಮಧ್ಯೆ ಜಟಾಪಟಿ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಟೀಕೆ ಟಿಪ್ಪಣಿಗಳು ಬರುತ್ತಿವೆ. ನಮ್ಮ ಮಧ್ಯೆ ಜಗಳ ಹುಟ್ಟುಹಾಕುವ ಕೆಲಸ ನಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ ಎಂದರು.

‘ರಾಜ್ಯದಲ್ಲಿ ನೆರೆ- ಬರದಂಥ ಸವಾಲಿನ ಕಾಲಘಟ್ಟದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅವರಿಗೆ ಬಲ ನೀಡುವುದು ನನ್ನ ಜವಾಬ್ದಾರಿ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಕಾರ್ಯಕರ್ತರು ಮತ್ತು ಪಕ್ಷದ ಪದಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಪಕ್ಷದ ವೇದಿಕೆ ಹೊರತುಪಡಿಸಿ ಬೇರೆಲ್ಲೂ ಬಹಿರಂಗ ಹೇಳಿಕೆ ನೀಡಬಾರದು’ ಎಂದು ಸೂಚಿಸಿದರು.

‘ಯಡಿಯೂರಪ್ಪ ನೇತೃತ್ವದಲ್ಲಿ ನಾನು ಹಾಗೂ ಬಿಜೆಪಿ ಸಂಸದರು ಸದ್ಯದಲ್ಲೇ ಪ್ರಧಾನಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

13 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

17 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

18 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago