ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರು ಅವಕಾಶ ನೀಡಿರುವ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೊರಬೀಳಲಿದ್ದು ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚನೆಯ ವರೆಗೂ ಉಳಿಯುವುದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ.
ಇಂದು ವಿಚಾರಣೆ ಆರಂಭವಾಗಲಿದೆ. ಈ ವೇಳೆ ನ್ಯಾಯಾಧೀಶರು ಕೇಳುವ ಪ್ರಶ್ನೆಗಳು ಹಾಗೂ ದಾಖಲೆಗಳನ್ನು ಒದಗಿಸಲು ಪರ ಮತ್ತು ವಿರೋಧಿಗಳ ವಕಾಲತ್ತು ವಹಿಸಿರುವ ನ್ಯಾಯಾಧೀಶರು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಬೆಳಗಿನ ಜಾವ 1.45ಕ್ಕೆ, ತ್ವರಿತ ವಿಚಾರಣೆಗಾಗಿ ಕೈಗೆತ್ತಿಕೊಂಡಿತ್ತು.
ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ, ಎಸ್.ಎ. ಬೋಬ್ಡೆ ಹಾಗೂ ಅಶೋಕ್ ಭೂಷಣ್ ಅವರಿದ್ದ ತ್ರಿಸದಸ್ಯ ಪೀಠ ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು’ ಎಂದು ಅಭಿಪ್ರಾಯಪಟ್ಟು, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.
ಸರ್ಕಾರ ರಚನೆಯ ಪ್ರಸ್ತಾವನೆಯೊಂದಿಗೆ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಶಾಸಕರ ಬೆಂಬಲದ ಪತ್ರದ ಪ್ರತಿಯನ್ನು ಹಾಜರುಪಡಿಸುವಂತೆ ಸೂಚಿಸಿತ್ತು.
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…