Featured

ಯತ್ನಾಳ್‌ ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ : ರಮೇಶ್‌ ಜಾರಕಿಹೊಳಿ – vishwanews24

ಯತ್ನಾಳ್‌ ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ : ರಮೇಶ್‌ ಜಾರಕಿಹೊಳಿ

ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಈಗಲೂ ನಮ್ಮ ತಂಡದಲ್ಲಿಯೇ ಇದ್ದಾರೆ. ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಯತ್ನಾಳ್‌ ಮಾತಿನ ಭರದಲ್ಲಿ ಏನೇನೂ ಮಾತನಾಡುತ್ತಾರೆ. ಅವರ ಮಾತಿನಲ್ಲಿ ಯಾವುದೇ ದ್ವೇಷ ಹಾಗೂ ಕೆಟ್ಟ ಭಾವನೆ ಇಲ್ಲ. ಮಾತನಾಡುವುದು ಅವರ ಹುಟ್ಟು ಗುಣ. ಯಾರನ್ನೂ ಬೈಯದಂತೆ, ಪಕ್ಷಕ್ಕೆ ಮುಜುಗುರ ಆಗುವ ರೀತಿ ಮಾತನಾಡದಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿಯಲ್ಲಿ ಯತ್ನಾಳ್‌ ಮಾತನಾಡಿದ್ದು ತಪ್ಪಿದೆ. ಅದರ ಅರ್ಥ ಬೇರೆ ಇದೆ, ತಪ್ಪು ಕಲ್ಪನೆ ಬೇಡ ಎಂದರು.

ಯತ್ನಾಳ್‌ ಬೇರೆ ಪಕ್ಷ ಕಟ್ಟುವುದಿಲ್ಲ. ಅವರು ಬಿಜೆಪಿ ನಾಯಕರನ್ನು ಬೈಯುತ್ತಿಲ್ಲ, ಒಂದೇ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಸಂಘಟನೆ ಮಾಡಿ ಮುಂದೆ ಸಾಗುವಂತೆ ಹೇಳಿದ್ದೇವೆ. ತಂದೆ ಹಾಗೂ ಮಗನ ಬಗ್ಗೆಯೂ ಮಾತನಾಡಬೇಡ ಎಂದು ಹೇಳಿದ್ದೇನೆ. ಸಂಘಟನೆ ಮಾಡುವುದನ್ನು ಬಿಟ್ಟು ಬೇರೆ ವಿಚಾರ ಮಾತನಾಡ ಬೇಡ ಎಂದು ಮನವಿ ಮಾಡಿದ್ದೇನೆ ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago